ಬೆಂಗಳೂರಿನಲ್ಲಿ ಮಗಳು ಅಕ್ಷತಾ ಮೂರ್ತಿ ಜತೆ ಐಸ್‌ಕ್ರೀಂ ಸವಿದ ಇನ್ಫೋಸಿಸ್‌ ನಾರಾಯಣಮೂರ್ತಿ

Narayana Murthy
Published on

ಬೆಂಗಳೂರು: ಸರಳ ಜೀವನಕ್ಕೆ ಹೆಸರುವಾಸಿಯಾಗಿರುವ ಇನ್ಫೋಸಿಸ್‌ನ ನಾರಾಯಣ ಮೂರ್ತಿ ಕುಟುಂಬ ಈಗ ಬೆಂಗಳೂರಿನಲ್ಲಿ ಮಗಳು ಅಕ್ಷತಾ ಜತೆ ನಾರಾಯಣ ಮೂರ್ತಿ ಜನಸಾಮಾನ್ಯರಂತೆ ಕುಳಿತು ಐಸ್ ಕ್ರೀಮ್ ಸವಿಯುತ್ತಿರುವ ಫೋಟೋ ವೈರಲ್ ಆಗಿದೆ.

ನಾರಾಯಣ ಮೂರ್ತಿ ಭಾರತದ ಅತಿದೊಡ್ಡ ಐಟಿ ಕಂಪನಿಗಳಲ್ಲಿ ಒಂದಾದ ಇನ್ಫೋಸಿಸ್‌ನ ಬಿಲಿಯನೇರ್ ಸಂಸ್ಥಾಪಕರಾಗಿದ್ದಾರೆ. ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ, ಮಗಳು, ಬ್ರಿಟನ್‌ನ ಪ್ರಥಮ ಮಹಿಳೆ ಅಕ್ಷತಾ ಮೂರ್ತಿ ಬ್ರಿಟನ್ ಪ್ರಧಾನಿ ರಿಷಿ ಸುನಕ್‌ ಪತ್ನಿಯಾಗಿರುವ ಅಕ್ಷತಾ ಯಾವಾಗಲೂ ಸಾಮಾನ್ಯರಲ್ಲಿ ಸಾಮಾನ್ಯರಂತೆ ಓಡಾಡಿಕೊಂಡಿರುತ್ತಾರೆ. ಹಾಗೆಯೇ ಇತ್ತೀಚಿಗೆ ಬೆಂಗಳೂರಿನಲ್ಲಿ ಮಗಳು ಅಕ್ಷತಾ ಜತೆ ನಾರಾಯಣ ಮೂರ್ತಿ ಐಸ್ ಕ್ರೀಮ್ ಸವಿಯುತ್ತಿರುವ ಫೋಟೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಬ್ರಿಟನ್‌ನ ಪ್ರಥಮ ಮಹಿಳೆ ಅಕ್ಷತಾ ಮೂರ್ತಿ ಅವರ ತಂದೆ ಮತ್ತು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರೊಂದಿಗೆ ಜಯನರದ ಐಸ್‌ಕ್ರೀಂ ಜಾಯಿಂಟ್‌ನಲ್ಲಿ ಐಸ್‌ಕ್ರೀಂ ಸವಿಯುತ್ತಿದ್ದು ಫೋಟೋಗೆ ಫೋಸ್ ನೀಡಿದ್ದಾರೆ. ತಂದೆ ಮತ್ತು ಮಗಳು ತಮ್ಮ ಕ್ಯಾಶುಯಲ್ ಉಡುಪಿನಲ್ಲಿ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಇವರಿಬ್ಬರ ಸರಳತೆಯನ್ನು ನೆಟ್ಟಿಗರು ಶ್ಲಾಘಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net