More

    ನರೇಗಾ ಸಮರ್ಪಕವಾಗಿ ಅನುಷ್ಠಾನವಾಗಲಿ

    ದೇವದುರ್ಗ: ಗ್ರಾಮೀಣ ಭಾಗದ ಜನರು ಗುಳೆ ಹೋಗುವುದನ್ನು ತಪ್ಪಿಸಲು ಉದ್ಯೋಗ ಖಾತ್ರಿ ಯೋಜನೆ ಸಹಕಾರಿಯಾಗಿದೆ ಎಂದು ಶಾಸಕಿ ಕರೆಮ್ಮ ಜಿ.ನಾಯಕ ಹೇಳಿದರು.

    ಗುಳೆ ತಪ್ಪಿಸಲು ನರೇಗಾ ಸಹಕಾರಿ

    ಪಟ್ಟಣದ ತಾಪಂ ಕಚೇರಿ ಆವರಣದಲ್ಲಿ ನರೇಗಾ ಪ್ರಚಾರ ರಥಕ್ಕೆ ಚಾಲನೆ ನೀಡಿ ಸೋಮವಾರ ಮಾತನಾಡಿದರು. ನರೇಗಾ ಯೋಜನೆಯಡಿ ಹಲವು ಅಭಿವೃದ್ಧಿ ಕಾಮಗಾರಿ ಮಾಡಿಕೊಳ್ಳಲು ಅನುಕೂಲವಾಗಿದೆ. ಗ್ರಾಮೀಣ ಭಾಗದ ಜನರಿಗೆ 100 ದಿನ ಕೆಲಸ ನೀಡಲಾಗುತ್ತಿದೆ. ಇದರ ಜತೆಗೆ ವಿವಿಧ ಅಭಿವೃದ್ಧಿ ಕೆಲಸ ಮಾಡಲು ಅವಕಾಶವಿದೆ. ಜನರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

    ಇದನ್ನೂ ಓದಿ: ಕೆಇಎ ಪರೀಕ್ಷೆ ಅಕ್ರಮ ಪ್ಲ್ಯಾನ್​ ಹೇಗೆ ಆಗಿತ್ತು?

    ಖಾತ್ರಿ ಯೋಜನೆಯಡಿ ನಮ್ಮ ಹೊಲ ನಮ್ಮ ರಸ್ತೆ, ರೈತರ ಜಮೀನುಗಳಲ್ಲಿ ಬದು ನಿರ್ಮಾಣ, ಕೃಷಿಹೊಂಡ ನಿರ್ಮಾಣ ಸೇರಿ ವಿವಿಧ ಕೆಲಸ ಮಾಡಿಕೊಳ್ಳಲು ಅವಕಾಶವಿದೆ. ಅಧಿಕಾರಿಗಳು ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಕೆಲಸಕ್ಕಾಗಿ ಅರ್ಜಿ ಸಲ್ಲಿಸುವ ಎಲ್ಲರಿಗೂ ಕೆಲಸ ನೀಡಬೇಕು. ರಥಯಾತ್ರೆಯಲ್ಲಿ ನರೇಗಾ ಯೋಜನೆಯ ಉದ್ದೇಶ ಜನರಿಗೆ ತಿಳಿಸಬೇಕು ಎಂದು ಹೇಳಿದರು.

    ತಾಪಂ ಇಒ ರಾಮರೆಡ್ಡಿ ಪಾಟೀಲ್, ಸಹಾಯಕ ನಿರ್ದೇಶಕ ಅಣ್ಣರಾವ್, ತಾಲೂಕು ಯೋಜನಾಧಿಕಾರಿ ರಾಘವೇಂದ್ರ, ಜೆಡಿಎಸ್ ತಾಲೂಕು ಅಧ್ಯಕ್ಷ ಬುಡ್ಡನಗೌಡ ಪಾಟೀಲ್ ಹಾಗೂ ವಿವಿಧ ಗ್ರಾಪಂ ಪಿಡಿಒಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts