More

    ನರೇಗಾ ಕೂಲಿಕಾರರಿಗೆ ಸೌಲಭ್ಯ ಒದಗಿಸಿ

    ದೇವದುರ್ಗ: ತಾಲೂಕಿನ ಜಾಲಹಳ್ಳಿ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಕೆಲಸ ಮಾಡುವ ಕೂಲಿಕಾರರಿಗೆ ಅಗತ್ಯ ಸೌಲಭ್ಯ ಒದಗಿಸುವಂತೆ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಟನೆ ತಾಲೂಕು ಅಧ್ಯಕ್ಷ ಲಿಂಗಣ್ಣ ಮಕಾಶಿ ಒತ್ತಾಯಿಸಿದರು.

    ಇದನ್ನೂ ಓದಿ: ನರೇಗಾ ಕಾಮಗಾರಿ ಸಮರ್ಪಕ ಅನುಷ್ಠಾನವಾಗಲಿ: ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಹೇಳಿಕೆ

    ಬಿ.ಗಣೇಕಲ್ ಗ್ರಾಪಂನಲ್ಲಿ ನರೇಗಾದಡಿ ಹೂಳುತೆಗೆಯುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಸೋಮವಾರ ಮಾತನಾಡಿದರು. ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರಿಗೆ ಕೆಲಸ ನೀಡಲಾಗಿದ್ದು, ಕೆಲಸದ ಸ್ಥಳದಲ್ಲಿ ಕುಡಿವ ನೀರು, ವಿಶ್ರಾಂತಿ ವೇಳೆ ನೆರಳಿನ ವ್ಯವಸ್ಥೆ ಕಲ್ಪಿಸಿಲ್ಲ.

    ಸುಮಾರು 1500 ಕೂಲಿಕಾರರಿಗೆ ಕೆಲಸ ನೀಡಲಾಗಿದೆ. ಪ್ರಥಮ ಚಿಕಿತ್ಸೆ ವ್ಯವಸ್ಥೆ ಹಾಗೂ ಇತರ ಅಗತ್ಯ ಸೌಕರ್ಯ ಕಲ್ಪಿಸುವಂತೆ ಪಿಡಿಒಗೆ ಕೂಲಿಕಾರರು ಒತ್ತಾಯಿಸಿದ್ದರೂ ನಿರ್ಲಕ್ಷೃವಹಿಸಿದ್ದಾರೆ ಎಂದು ದೂರಿದರು.

    ಮೇಲಧಿಕಾರಿಗಳು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಕೂಲಿಕಾರರಿಗೆ ಸೌಲಭ್ಯ ಕಲ್ಪಿಸದ ಅಧಿಕಾರಿಗಳ ವಿರುದ್ಧ ಕ್ರಮ ವಹಿಸಬೇಕು. ಈ ಬಗ್ಗೆ ತಾಪಂ ಇಒಗೆ ದೂರು ನೀಡಲಾಗುವುದು ಎಂದು ಲಿಂಗಣ್ಣ ಮಕಾಶಿ ತಿಳಿಸಿದರು. ಕೂಲಿಕಾರರಾದ ಕೃಷ್ಣರಾಜ ನಾಯಕ, ಮಲ್ಲೇಶ, ಶಿವಪ್ಪ, ಬಸವರಾಜ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts