ನರೇಂದ್ರ ದಾಭೋಲ್ಕರ್ ಹತ್ಯೆ: ಮೂವರು ಆರೋಪಿಗಳು ಖುಲಾಸೆ

davolkar
Published on

ಪುಣೆ: ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಶುಕ್ರವಾರ ಪುಣೆ ನ್ಯಾಯಾಲಯವು ಇಬ್ಬರನ್ನು ದೋಷಿಗಳೆಂದು ಘೋಷಿಸಿದೆ ಹಾಗೂ ಮೂವರನ್ನು ಖುಲಾಸೆಗೊಳಿಸಿದೆ.

ದೋಷಿಗಳೆಂದು ನ್ಯಾಯಾಲಯದಿಂದ ಘೋಷಿಸಲ್ಪಟ್ಟವರಾದ ಸಚಿನ್ ಅಂದೂರೆ ಹಾಗೂ ಶರದ್ ಕಲಸ್ಕರ್ಗೆ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಧಿಸಲಾಗಿದೆ. ಡಾ ವೀರೇಂದ್ರ ಸಿಂಗ್ ತಾವಡೆ, ವಿಕ್ರಮ್ ಭಾವೆ ಮತ್ತು ಸಂಜೀವ್ ಪುನಲೇಕರ್ ಅವರನ್ನು ಖುಲಾಸೆಗೊಳಿಸಿದೆ.

ಮಹಾರಾಷ್ಟ್ರ ಅಂಧಶ್ರದ್ಧ ನಿರ್ಮೂಲನ್ ಸಮಿತಿ ಸ್ಥಾಪಕರಾಗಿದ್ದ ದಾಭೋಲ್ಕರ್ ಅವರನ್ನು ಪುಣೆಯಲ್ಲಿ 2013ರಲ್ಲಿ ಅವರು ಬೆಳಗ್ಗೆ ವಾಕಿಂಗ್​ ಗೆ ಹೋಗಿದ್ದ ವೇಳೆ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net