ಮಧುವಣಗಿತ್ತಿಯಂತೆ ಶೃಂಗಾರಗೊಂಡ ಅಯೋಧ್ಯೆ; ಇಂದು 'ರಾಮನಗರಿ'ಗೆ ಭರ್ಜರಿ ಗಿಫ್ಟ್ ನೀಡಲಿದ್ದಾರೆ ಪ್ರಧಾನಿ ಮೋದಿ

flower
Published on

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮಲಲ್ಲಾ ಪಟ್ಟಾಭಿಷೇಕ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿದ್ದು, ಇಂದು ಅಯೋಧ್ಯೆಗೆ ಭರ್ಜರಿ ಗಿಫ್ಟ್ ನೀಡಲಿದ್ದಾರೆ. ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಹೊಸದಾಗಿ ನಿರ್ಮಿಸಲಾದ ಅಯೋಧ್ಯಾ ಧಾಮ್ ರೈಲ್ವೆ ನಿಲ್ದಾಣದ ಕಟ್ಟಡವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.

ಅಯೋಧ್ಯೆಯಿಂದ 6 ವಂದೇ ಭಾರತ್ ಮತ್ತು ಎರಡು ಅಮೃತ್ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಇದರ ನಂತರ, ಪ್ರಧಾನಿ ಮೋದಿ ಅವರು ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ 16 ಕಿಲೋಮೀಟರ್ ರೋಡ್ ಶೋ ನಡೆಸಲಿದ್ದಾರೆ, ಈ ಸಂದರ್ಭದಲ್ಲಿ ಸಂತ ಸಮಾಜದ ಜೊತೆಗೆ ವೈದಿಕ ಬ್ರಾಹ್ಮಣರು ವೇದ ಮಂತ್ರಗಳ ಪಠಣದ ನಡುವೆ ಪುಷ್ಪವೃಷ್ಟಿ ಮಾಡಲಿದ್ದಾರೆ.

ಕಟ್ಟುನಿಟ್ಟಿನ ಭದ್ರತೆಗಾಗಿ ರಸ್ತೆಯ ಎರಡೂ ಬದಿಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದೆ. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್‌ ಆಗಿದ್ದು, ಅಯೋಧ್ಯಾ ಧಾಮದಲ್ಲಿ ನಡೆದಾಡಲು ಕೂಡ ನಿರ್ಬಂಧ ಹೇರಲಾಗಿದೆ. ಇಂದು ಅಯೋಧ್ಯೆಯಲ್ಲಿ 15,700 ಕೋಟಿ ರೂಪಾಯಿ ಮೌಲ್ಯದ 46 ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ ಮತ್ತು ಅಯೋಧ್ಯೆ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಿಗೆ ಮಾತ್ರ 11,100 ಕೋಟಿ ರೂಪಾಯಿಗಳ ಯೋಜನೆಗಳನ್ನು ಉಡುಗೊರೆಯಾಗಿ ನೀಡಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net