ಮೋದಿ ಪ್ರಧಾನಿಯಾಗಿ ಆಯ್ಕೆಯಾಗಿದ್ದಕ್ಕೆ ಉರುಳು ಸೇವೆ ಮಾಡಿ ಹರಕೆ ತೀರಿಸಿದ ಅಭಿಮಾನಿ

PM Modi Fan
Published on

ಉತ್ತರಕನ್ನಡ: ತಮ್ಮ ನೆಚ್ಚಿನ ಪಕ್ಷ, ನಾಯಕರ ಗೆಲುವಿಗೆ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹಂಬಲಿಸೋದು ಸಹಜ. ಆದರೆ, ಇಲ್ಲೊಬ್ಬ ವ್ಯಕ್ತಿ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡಿದ್ದಕ್ಕೆ ಅಭಿಮಾನಿಯೊಬ್ಬರು ಉರುಳುಸೇವೆ ಮಾಡಿ ಹರಕೆ ತೀರಿಸಿದ ಅಪರೂಪದ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನಲ್ಲಿ ನಡೆದಿದೆ.

ಅಂಕೋಲಾ ತಾಲ್ಲೂಕಿನ ಹಳವಳ್ಳಿ ಗ್ರಾಮದ ನಿವಾಸಿ ಹರಿಹರ ಭಟ್​ ಅವರು ಉರುಳು ಸೇವೆ ಮಾಡುವ ಮೂಲಕ ಪ್ರಧಾನಿ ಮೋದಿ ಅವರ ಮೇಲೆ ತಮ್ಮಗಿರುವ ಅಭಿಮಾನವನ್ನು ತೋರ್ಪಡಿಸಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಹರಿಹರ ಭಟ್​ ಅವರು ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಹರಕೆ ಹೊತ್ತಿದ್ದರು. ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತೊಮ್ಮೆ ಅಧಿಕಾರ ವಹಿಸಿಕೊಂಡರೆ ಉರುಳುಸೇವೆ ಮಾಡುವುದಾಗಿ ಹರಕೆ ಹೊತ್ತಿದ್ದರು. ಇದೀಗ ನರೇಂದ್ರ ಮೋದಿ ಪ್ರಧಾನಿಯಾಗಿ ಆಯ್ಕೆಯಾದ ಬೆನ್ನಲ್ಲೇ ಉರುಳು ಸೇವೆ ಮಾಡಿ ಹರಕೆ ತೀರಿಸಿದ್ದಾರೆ.

18ನೇ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಜೂನ್​ 04ರಂದು ಹೊರಬಿದ್ದಿದ್ದು, ನಿರೀಕ್ಷೆಯಂತೆ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟವು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಮೂರನೇ ಬಾರಿಗೆ ಸರ್ಕಾರ ರಚಿಸಿದೆ. ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪದಗ್ರಹಣ ಮಾಡಿದ್ದು, ಬಳಿಕ ಮೊದಲ ವಿದೇಶ ಪ್ರವಾಸವನ್ನು ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net