25.5 C
Bangalore
Monday, December 16, 2019

ಪೌರತ್ವ (ತಿದ್ದುಪಡಿ) ಮಸೂದೆ ಮಂಡನೆಗೆ ಬಿಜೆಪಿ ಸಿದ್ಧತೆ: ಚಳಿಗಾಲದ ಅಧಿವೇಶನದ ಕಾವು ಹೆಚ್ಚಾಗುವ ಸಾಧ್ಯತೆ

Latest News

ಮುಸ್ಲಿಂರಿಂದ ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ

* ಸಾಮರಸ್ಯಕ್ಕೆ ಮುನ್ನುಡಿ ಬರೆದ ಕಾರ್ಯಕ್ರಮವಿಜಯವಾಣಿ ಸುದ್ದಿಜಾಲ ಬಳ್ಳಾರಿನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ...

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

ಲಖನೌಗೆ ಕಾಲಿಟ್ಟ ಪೌರತ್ವ ಪ್ರತಿಭಟನೆ; ಕ್ಲಾಸ್​ ರೂಂನಿಂದ ಹೊರಗೆ ಬಂದು ಪೊಲೀಸರ ಮೇಲೆ ಕಲ್ಲು ಎಸೆದ ನಡ್ವಾ ಕಾಲೇಜು ವಿದ್ಯಾರ್ಥಿಗಳು

ಲಖನೌ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಉತ್ತರ ಪ್ರದೇಶ ಮತ್ತು ದೆಹಲಿ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಕೂಡ ಬೀದಿಗಿಳಿದಿದ್ದು ಪೊಲೀಸರು...

ಈ ಡಿಫರೆಂಟ್ ಮ್ಯಾಗಿ ರುಚಿಯನ್ನು ಬಲ್ಲವರೇ ಬಲ್ಲರು, ತಯಾರಿಸೋದೂ ತುಂಬ ಸಿಂಪಲ್!: ಕಲ್ಪನೆಗೂ ನಿಲುಕದ್ದು ಎಂದ್ರು ನೆಟ್ಟಿಗರು

ಸಾಮಾಜಿಕ ಜಾಲತಾಣಗಳಲ್ಲಿ ಏನೇನೆಲ್ಲ ವೈರಲ್​ ಆಗುತ್ತವೆ ಎಂದು ಹೇಳಲು ಸಾಧ್ಯವಿಲ್ಲ. ಅಡುಗೆ, ಫ್ಯಾಷನ್​ನಿಂದ ಹಿಡಿದು ಪ್ರತಿಯೊಂದೂ ಏನೇನೋ ವಿಭಿನ್ನ, ವಿಶಿಷ್ಟ ಸಂಗತಿಗಳೆಲ್ಲ ಶೇರ್​ ಆಗುತ್ತ ಟ್ರೆಂಡ್...

ನವದೆಹಲಿ: ಲೋಕಸಭೆಯ ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗಲಿದೆ. ಈ ಅಧಿವೇಶನದಲ್ಲಿ ಪೌರತ್ವ (ತಿದ್ದುಪಡಿ) ಮಸೂದೆ ಮಂಡಿಸಲು ಬಿಜೆಪಿ ಸಿದ್ಧತೆ ನಡೆಸಿದೆ. ಇದರಿಂದಾಗಿ ಚಳಿಗಾಲದ ಅಧಿವೇಶನದಲ್ಲಿ ಕಾವು ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ.

- Advertisement -

ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿರುವ ಹಿಂದುಗಳು, ಸಿಖ್​, ಕ್ರಿಶ್ಚಿಯನ್​, ಪಾರ್ಸಿ, ಬೌದ್ಧ ಮತ್ತು ಜೈನ ಧರ್ಮಕ್ಕೆ ಸೇರಿದವರಿಗೆ ಭಾರತದ ಪೌರತ್ವ ನೀಡುವ ನಿಟ್ಟಿನಲ್ಲಿ 1955ರ ಪೌರತ್ವ ಕಾಯ್ದೆಗೆ ತಿದ್ದುಪಡಿ ತರಲು ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರ ಕಳೆದ ಅವಧಿಯಲ್ಲಿ ಪ್ರಯತ್ನಿಸಿತ್ತು. ಆದರೆ, ರಾಜ್ಯಸಭೆಯಲ್ಲಿ ಈ ಮಸೂದೆಗೆ ಅನುಮೋದನೆ ಪಡೆದುಕೊಳ್ಳಲು ಅದಕ್ಕೆ ಸಾಧ್ಯವಾಗಿರಲಿಲ್ಲ. ಹಾಗಾಗಿ ಪೌರತ್ವ (ತಿದ್ದುಪಡಿ) ಮಸೂದೆ ಮಾನ್ಯತೆ ಕಳೆದುಕೊಂಡಿದೆ.

ಸಾಮಾನ್ಯವಾಗಿ ಲೋಕಸಭೆಯ ಅನುಮೋದನೆ ಪಡೆದು ರಾಜ್ಯಸಭೆಯಲ್ಲಿ ಮಸೂದೆಗಳು ಮಂಡನೆಗೊಂಡಿದ್ದು, ಈ ಅವಧಿಯಲ್ಲಿ ಲೋಕಸಭೆ ಬರ್ಖಾಸ್ತುಗೊಂಡರೆ, ಮಂಡನೆಯಾಗಿರುವ ಮಸೂದೆಗಳು ಬಾಕಿವುಳಿದಿರುವ ಮಸೂದೆಗಳು ಎಂದು ಪರಿಗಣಿಸಲ್ಪಡುತ್ತವೆ. ಆದರೆ, ಪೌರತ್ವ (ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಅನುಮೋದನೆಗೊಂಡಿದ್ದರೂ ರಾಜ್ಯಸಭೆಯಲ್ಲಿ ಮಂಡನೆಗೊಂಡಿರಲಿಲ್ಲ. ಹಾಗಾಗಿ ಅದು ಮಾನ್ಯತೆ ಕಳೆದುಕೊಂಡಿದೆ.

ಧಾರ್ಮಿಕವಾಗಿ ಹತ್ತಿಕ್ಕುವಿಕೆಯಿಂದ ಪಾರಾಗಲು ನೆರೆ ರಾಷ್ಟ್ರಗಳಿಂದ 2014ರ ಡಿಸೆಂಬರ್​ 31ಕ್ಕೆ ಅನ್ವಯವಾಗುವಂತೆ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡುವುದು ಸರ್ಕಾರದ ಉದ್ದೇಶವಾಗಿದೆ. ಆದರೆ ಈ ಮಸೂದೆ ಮತೀಯ ತಾರತಮ್ಯದಿಂದ ಕೂಡಿದೆ ಎಂದು ಆರೋಪಿಸಿ ಪ್ರತಿಪಕ್ಷಗಳು ಪೌರತ್ವ (ತಿದ್ದುಪಡಿ) ಮಸೂದೆಗೆ ಭಾರಿ ವಿರೋಧ ವ್ಯಕ್ತಪಡಿಸುತ್ತಿವೆ.

ನೆರೆಯ ಮೂರು ರಾಷ್ಟ್ರಗಳಿಂದ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಮೇತರ ಜನರ ಹಿನ್ನೆಲೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರದಲ್ಲಿ ಅವರಿಗೆ ಪೌರತ್ವ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಈ ವರ್ಷದ ಫೆಬ್ರವರಿಯಲ್ಲಿ ಹೇಳಿದ್ದರು. ಭಾರತದಲ್ಲಿನ ಸಂಪನ್ಮೂಲಗಳು ಮತ್ತು ಮೂಲ ಸೌಕರ್ಯಗಳನ್ನು ದುರ್ಬಳಕೆ ಮಾಡಿಕೊಳ್ಳಲು ಭಾರತದೊಳಗೆ ನುಸುಳುವ ಹಾಗೂ ಮತೀಯ ದೌರ್ಜನ್ಯಕ್ಕೆ ಒಳಗಾಗಿ ಭಾರತಕ್ಕೆ ವಲಸೆ ಬರುವ ಜನರ ನಡುವೆ ಸಾಕಷ್ಟು ವ್ಯತ್ಯಾಸವಿದೆ. ಇಂಥವರನ್ನು ಮಾನವೀಯ ದೃಷ್ಟಿಯಿಂದ ನೋಡುವುದು ಅವಶ್ಯಕ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದರು. ಈ ಹಿನ್ನೆಲೆಯಲ್ಲಿ ಪೌರತ್ವ (ತಿದ್ದುಪಡಿ) ಮಸೂದೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತದೆ. (ಏಜೆನ್ಸೀಸ್​)

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...