ಪದ್ಮಶ್ರೀ ಪುರಸ್ಕೃತ ಸುಕ್ರಿ ಗೌಡ, ತುಳಸಿ ಗೌಡ ಅವರನ್ನು ಭೇಟಿಯಾದ ನರೇಂದ್ರ ಮೋದಿ

karwara modi
Published on

ಕಾರವಾರ: ಚುನಾವಣಾ ಹಿನ್ನೆಲೆ ಮತಪ್ರಚಾರ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಇಂದು ಉತ್ತರಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಹಾಲಕ್ಕಿ ಸಮುದಾಯದ ಪದ್ಮಶ್ರೀ ಪುರಸ್ಕೃತ ಸುಕ್ರಿ ಗೌಡ, ತುಳಸಿ ಗೌಡ ಅವರನ್ನು ಭೇಟಿಯಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ಟಿಕೇರಿಯಲ್ಲಿ ಆಯೋಜಿಸಲಾಗಿರುವ ಬಿಜೆಪಿ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದ್ದು, ಈ ವೇಳೆ ಪದ್ಮ ಪ್ರಶಸ್ತಿ ಪುರಸ್ಕೃತರನ್ನು ಭೇಟಿಯಾದರು.

ಸಮಾರಂಭಕ್ಕೂ ಮೊದಲು ಪದ್ಮ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ ಅವರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ, ತಲೆ ಬಾಗಿ ನಮನ ಸಲ್ಲಿಸಿದರು.

ಹಾಲಕ್ಕಿ ಸಮುದಾಯಕ್ಕೆ ಸೇರಿದ ಈ ಮಹಾನ್ ಮಹಿಳೆಯರ ಸಾಧನೆ ಪರಿಸರ ಕಾಳಜಿ, ಜಾನಪದ ಗಾಯನದಲ್ಲಿ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಯನ್ನು ನೀಡಿ ಭಾರತ ಸರ್ಕಾರ ಗೌರವಿಸಿದ್ದು, ವಿಶೇಷವಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net