ಕಾಶಿ ವಿಶ್ವನಾಥನಿಗೆ ನಮೋ ನಮಃ: ಪ್ರಧಾನಿಯಾಗಿ ಪ್ರಮಾಣವಚನಕ್ಕೂ ಮುನ್ನ ಸ್ವಕ್ಷೇತ್ರಕ್ಕೆ ನರೇಂದ್ರ ಮೋದಿ ಭೇಟಿ

ವಾರಾಣಸಿ: ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸ್ವಕ್ಷೇತ್ರ ವಾರಾಣಸಿಗೆ ಆಗಮಿಸಿದ್ದಾರೆ. ಇಲ್ಲಿನ ಶ್ರೀ ಕಾಶಿ ವಿಶ್ವನಾಥನ ದೇಗುಲಕ್ಕೆ ತೆರಳಿ ಅವರು ವಿಶೇಷ ಪೂಜೆ ಸಲ್ಲಿಸಿದರು.

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಷಾ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರು ನರೇಂದ್ರ ಮೋದಿ ಅವರಿಗೆ ಸಾಥ್​ ನೀಡಿದರು.

ಲೋಕಸಭೆ ಚುನಾವಣೆ ಘೋಷಣೆಯಾದ ಬಳಿಕ ವಾರಾಣಸಿಯಿಂದ ನಾಮಪತ್ರ ಸಲ್ಲಿಸಿದ್ದ ನರೇಂದ್ರ ಮೋದಿ ರೋಡ್​ ಶೋ ನಡೆಸಿದ್ದರು. ಈ ಸಂದರ್ಭದಲ್ಲಿ ವಾರಾಣಸಿಯ ಪ್ರತಿಯೊಬ್ಬ ಮತದಾರರು ನರೇಂದ್ರ ಮೋದಿ ಇದ್ದಂತೆ. ನೀವೇ ಪ್ರಚಾರ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು. ಹಾಗೂ ತಮ್ಮನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿಕೊಂಡಿದ್ದರು.

ಇದಕ್ಕೆ ಸ್ಪಂದಿಸಿದ್ದ ವಾರಾಣಸಿಯ ಮತದಾರರು ನರೇಂದ್ರ ಮೋದಿ ಅವರನ್ನು ಅಂದಾಜು 5 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ, ಲೋಕಸಭೆಗೆ ಕಳುಹಿಸಿದ್ದಾರೆ. ಇದಕ್ಕಾಗಿ ತಮ್ಮ ಕ್ಷೇತ್ರದ ಮತದಾರರಿಗೆ ಧನ್ಯವಾದ ಅರ್ಪಿಸಲು ಪ್ರಧಾನಿ ಮೋದಿ ವಾರಾಣಸಿಗೆ ಆಗಮಿಸಿದ್ದಾರೆ.

Leave a Reply

Your email address will not be published. Required fields are marked *