ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ನರೇಂದ್ರ ಮೋದಿ V/S ಡಿ.ಕೆ.ಶಿವಕುಮಾರ್?

ಬೆಂಗಳೂರು: ಈ ಬಾರಿ ವಡೋದರಾ ಕ್ಷೇತ್ರದಲ್ಲಿ ನರೇಂದ್ರ ಮೋದಿಯವರು ಸ್ಪರ್ಧಿಸುವುದಿಲ್ಲ ಎಂಬುದು ಖಚಿತವಾಗಿದ್ದು, ಸದ್ಯ ಅವರು ಇನ್ನೊಂದು ಕ್ಷೇತ್ರ ಯಾವುದನ್ನು ಆಯ್ದುಕೊಳ್ಳುತ್ತಾರೆ ಎಂಬ ಕುತೂಹಲ ಉಂಟಾಗಿದೆ. ಈ ಮಧ್ಯೆ ಮೋದಿ ಬೆಂಗಳೂರು ದಕ್ಷಿಣದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಕೂಡ ಹೇಳಲಾಗುತ್ತಿದೆ.

ಬೆಂಗಳೂರು ದಕ್ಷಿಣದಿಂದ ಮೋದಿಯವರು ಒಂದೊಮ್ಮೆ ಸ್ಪರ್ಧಿಸಿದರೆ ಅವರಿಗೆ ಪ್ರತಿ ಸ್ಪರ್ಧಿಯಾಗಿ ಕಾಂಗ್ರೆಸ್​ನಿಂದ ಡಿ.ಕೆ.ಶಿವಕುಮಾರ್​ ಕಣಕ್ಕಿಳಿಯಲಿದ್ದಾರೆ ಎಂಬ ಮಾಹಿತಿ ಬಲ್ಲ ಮೂಲಗಳಿಂದ ಲಭ್ಯವಾಗಿದೆ. ಕಾಂಗ್ರೆಸ್​ ಹೈ ಕಮಾಂಡ್​ ಈ ನಿರ್ಧಾರ ತೆಗೆದುಕೊಂಡಿದ್ದು, ನಿನ್ನೆ ತಡರಾತ್ರಿ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ವೇಣುಗೋಪಾಲ್​ ಅವರು ಡಿಕೆಶಿಗೆ ನಾಮಪತ್ರ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲು ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.