ಇಂಡಿಯಲ್ಲಿ ಬಿಜೆಪಿ ವಿಜಯೋತ್ಸವ

ಇಂಡಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಮಾಜಿ ಸಚಿವ ರಮೇಶ ಜಿಗಜಿಣಗಿ ಗೆಲುವು ಸಾಧಿಸಿದ ಹಿನ್ನೆಲೆ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.
ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ರಾಮಸಿಂಗ ಕನ್ನೊಳ್ಳಿ ನೇತೃತ್ವ ವಹಿಸಿ ಮಾತನಾಡಿ, ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯನ್ನಾಗಿಸಲು ದೇಶದ ಜನತೆ ಒಳ್ಳೆಯ ನಿರ್ಧಾರ ಕೈಗೊಂಡಿದ್ದಾರೆ. ದೇಶ ಲೂಟಿ ಮಾಡಲು ಹೊರಟಿದ್ದ ವಿರೋಧ ಪಕ್ಷದ ನಾಯಕರಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ತಿಳಿಸಿದರು.
ದೇವೇಂದ್ರ ಕುಂಬಾರ, ಸಂಜು ದಶವಂತ, ಅರ್ಜುನ ಾರ್ಸಿ, ಸುನೀಲ ಮಾನೆ, ಸತೀಶ ಕುಂಬಾರ, ಬಸವರಾಜ ಅಗಸರ, ಬಸು ಪತ್ರಿಮಠ, ನಾಗರಾಜ ದಶವಂತ, ಸತೀಶ ಲಾಳಗೆ, ಆನಂದ ಹಜೇರಿ ಮತ್ತಿತರರಿದ್ದರು.

Leave a Reply

Your email address will not be published. Required fields are marked *