More

    ಕೃಷಿ, ಕೃಷಿಕರ ಸಮಗ್ರ ಅಭಿವೃದ್ಧಿಗೆ‌ ಪಣ: ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿಕೆ

    ಬೆಂಗಳೂರು: ಕೃಷಿಕರು ಹಾಗೂ ಕೃಷಿ‌ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪಣ ತೊಟ್ಟಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದರು.

    ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾನುವಾರ ಆಯೋಜಿಸಿದ್ದ ‘ ಮುಖ್ಯಮಂತ್ರಿ ರೈತ ವಿದ್ಯಾ ನಿಧಿ ಕಾರ್ಯಕ್ರಮ’ ಲೋಕಾರ್ಪಣೆ ಸಮಾರಂಭದಲ್ಲಿ ಶಿಷ್ಯ ವೇತನ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನಗದು ನೇರ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಿ ಅವರು ಮಾತನಾಡಿದರು.

    ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಉತ್ಪಾದನೆ ಹೆಚ್ಚಳ, ಸಂಸ್ಕರಣೆ, ಮೌಲ್ಯವರ್ಧನೆ, ಮಾರುಕಟ್ಟೆ ರಫ್ತಿಗೆ ಉತ್ತೇಜನ, ಕಿಸಾನ್ ಸಮ್ಮಾನ್ ನಿಧಿ, ರೈತ ಉತ್ಪಾದಕ ಕಂಪನಿಗಳ ಸ್ಥಾಪನೆ ಸೇರಿದಂತೆ ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ಕರ್ನಾಟಕ ಸರ್ಕಾರ ಕೈಜೋಡಿಸಿದೆ ಎಂದರು.

    ಅನುಕರಣೀಯ ಹೆಜ್ಜೆ
    ರೈತರು, ಕೃಷಿ ಕ್ಷೇತ್ರದ ಅಭಿವೃದ್ಧಿ, ವಿಜ್ಞಾನ-ತಂತ್ರಜ್ಞಾನ‌ ಬಳಕೆ ವಿಚಾರದಲ್ಲಿ ಕರ್ನಾಟಕ ಹಲವು ಮೊದಲುಗಳನ್ನು ಸಾಧಿಸಿದ್ದು, ರೈತರ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು ನೀಡುವ ವಿದ್ಯಾ ನಿಧಿ ಯೋಜನೆ ದೇಶದಲ್ಲೇ ಮೊದಲಿನದು ಎಂದು ಪ್ರಶಂಸಿಸಿದರು.

    ಬಸವರಾಜ ಬೊಮ್ಮಾಯಿ‌ ನೇತೃತ್ವದ ಸರ್ಕಾರ ಕ್ರಾಂತಿಕಾರಕ ಹೆಜ್ಜೆಯಿಟ್ಡಿದ್ದು, ಬೇರೆ ರಾಜ್ಯಗಳು ಅನುಸರಿಸಬೇಕು ಎಂದು ನರೇಂದ್ರ ಸಿಂಗ್ ತೋಮರ್ ಸಲಹೆ ನೀಡಿದರು.

    ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡೋ “ಮುಖ್ಯಮಂತ್ರಿ ರೈತ ವಿದ್ಯಾನಿಧಿ” ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ

    ಐಎಎಸ್​ ಅಧಿಕಾರಿಗಳು vs ರಾಜಕಾರಣಿಗಳು: ರೋಹಿಣಿ ಸಿಂಧೂರಿ, ಮನೀಶ್​ ಮೌದ್ಗಿಲ್ ವಿರುದ್ಧ ವಾಗ್ದಾಳಿ

    ಲಾಟರಿ ಮೂಲಕ ಇಬ್ಬರ ಪ್ರೇಯಸಿಯರಲ್ಲಿ ಒಬ್ಬಳ ಆಯ್ಕೆ! ಮೋಸ ಹೋದ ಯುವತಿ ಹೇಳಿದ್ದೇನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts