ಕರಾಟೆಯಲ್ಲಿ ನಶೀತ್ ದ್ವಿತೀಯ

naseeth
ಪ್ರಶಸ್ತಿಯೊಂದಿಗೆ ಮಹಮ್ಮದ್ ನಶೀತ್
Published on

ಬೆಳ್ತಂಗಡಿ: ಮೂಡುಬಿದಿರೆಯ ಎಂ.ಕೆ.ಅನಂತ್ರಾಜ್ ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ಶೋರಿನ್ ರಿಯು ಕರಾಟೆ ಅಸೋಸಿಯೇಷನ್ ಮತ್ತು ಸ್ವಾಮಿಸ್ ಸ್ಟ್ರೆಂತ್ ಟ್ರೈನಿಂಗ್ ಸಹಯೋಗದೊಂದಿಗೆ ನಡೆದ 21ನೇ ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್-2024 ಸ್ಪರ್ಧೆಯಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮಹಮ್ಮದ್ ನಶೀತ್ ಕರಾಟೆ ಫೈಟಿಂಗ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಗಳಿಸಿದ್ದಾರೆ. ಸೆನ್ಸಾಯಿ ಅಬ್ದುಲ್ ರೆಹಮಾನ್ ಅವರಲ್ಲಿ ತರಬೇತು ಪಡೆದಿದ್ದರು. ಅವರು ಉಜಿರೆ ಗಾಂಧಿನಗರ ನಿವಾಸಿ ಮಹಮ್ಮದ್ ಬಷೀರ್ ಮತ್ತು ನಿಶಾ ದಂಪತಿ ಪುತ್ರ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net