'ಪದವಿ ಪೂರ್ವ' ಚಿತ್ರದಲ್ಲಿ ಲೆಕ್ಚರರ್ ಆದ್ರಾ 'ರಾಮಾ ರಾಮಾ ರೇ' ಸಿನಿಮಾ ಖ್ಯಾತಿಯ ನಟರಾಜ್?

WhatsApp Image 2021-01-06 at 12.31.07 PM
Published on

ಬೆಂಗಳೂರು: ಯೋಗರಾಜ್ ಸಿನಿಮಾಸ್ ಹಾಗೂ ರವಿ ಶಾಮನೂರ್ ಫಿಲಂಸ್‌ ಜಂಟಿ ನಿರ್ಮಾಣದಲ್ಲಿ ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿರುವ ಪದವಿಪೂರ್ವ ಚಿತ್ರ ಇದೀಗ ಮತ್ತೊಂದು ವಿಚಾರಕ್ಕೆ ಸದ್ದು ಮಾಡುತ್ತಿದೆ. ಈಗಾಗಲೇ ಶೂಟಿಂಗ್​ನಲ್ಲಿರುವ ಈ ಚಿತ್ರಕ್ಕೆ ಇದೀಗ ರಾಮಾ ರಾಮಾ ರೇ ಖ್ಯಾತಿಯ ನಟರಾಜ್ ಎಂಟ್ರಿ ಕೊಡುತ್ತಿದ್ದಾರೆ.

ಈಗಾಗಲೇ ಮಲ್ಲೇಶ್ವರಂನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒಂದಷ್ಟು ಭಾಗದ ಚಿತ್ರೀಕರಣ ಮಾಡಿಕೊಳ್ಳುತ್ತಿದ್ದು, ಇತ್ತೀಚೆಗಷ್ಟೇ ನವರಸನಾಯಕ ಜಗ್ಗೇಶ್​ ಶೂಟಿಂಗ್ ಸ್ಥಳಕ್ಕೆ ಭೇಟಿ ನೀಡಿ ಬಂದಿದ್ದರು. ಇದೀಗ ಇದೇ ತಂಡದ ಭಾಗವಾಗಿದ್ದಾರೆ ನಟ ನಟರಾಜ್. ನಟರಾಜ್ ಲುಕ್ ನೋಡಿದರೆ, ಅವರಿಲ್ಲಿ ಲೆಕ್ಚರ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದೇ ಹೇಳಲಾಗುತ್ತಿದೆಯಾದರೂ, ಇನ್ನಷ್ಟೇ ಚಿತ್ರತಂಡ ಅವರ ಪಾತ್ರದ ಗುಟ್ಟನ್ನು ಬಿಟ್ಟುಕೊಡಬೇಕಿದೆ.

ಚಿತ್ರದ ಎರಡನೇ ಹಂತದ ಚಿತ್ರೀಕರಣವು ಕೇವಲ ನಾಲ್ಕು ದಿನಗಳ ಹಿಂದೆಯಷ್ಟೇ ಪೂರ್ಣಗೊಂಡಿದ್ದು, ಮಲೆನಾಡಿನ ಸುತ್ತಮುತ್ತಲಿನ ಅತ್ಯಂತ ಸುಂದರ ತಾಣಗಳಲ್ಲಿ ದೃಶ್ಯಗಳ ಹಾಗೂ ಹಾಡುಗಳ ಚಿತ್ರೀಕರಣ ನಡೆಸಿ ಬೆಂಗಳೂರಿಗೆ ವಾಪಸ್ಸಾಗಿರುವ ಚಿತ್ರತಂಡ, ಚಿತ್ರದ ಮೂರನೇ ಹಂತದ ಚಿತ್ರೀಕರಣಕ್ಕಾಗಿ ಭರ್ಜರಿ ತಯಾರಿಯಲ್ಲಿ ತೊಡಗಿದೆ.

ಪದವಿಪೂರ್ವ ಚಿತ್ರಕ್ಕಾಗಿ ಅರ್ಜುನ್ ಜನ್ಯ ಸಂಯೋಜಿಸಿರುವ ರಾಗಗಳಿಗೆ ಯೋಗರಾಜ್ ಭಟ್ ಸಾಹಿತ್ಯ ರಚಿಸಿದರೆ, ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ ಕ್ಯಾಮರಾ ಹಾಗೂ ಮಧು ತುಂಬಕೆರೆಯ ಸಂಕಲನ ನಿಭಾಯಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net