More

    ಬೋಳ ಗ್ರಾಪಂ ರಸ್ತೆಗೆ ನಾಥೂರಾಮ್ ಗೋಡ್ಸೆ ನಾಮಫಲಕ, ಭಾರಿ ಆಕ್ರೋಶ

    ಕಾರ್ಕಳ: ಕಾರ್ಕಳ ತಾಲೂಕಿನ ಬೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡುಗಿರಿಗೆ ಹೋಗುವ ಪಂಚಾಯಿತಿ ರಸ್ತೆಗೆ ನಾಥೂರಾಮ್ ಗೋಡ್ಸೆ ನಾಮಫಲಕ ಅಳವಡಿಸಿರುವುದು ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

    ಮೂರು ದಿನಗಳ ಹಿಂದೆ ಈ ವಿವಾದಾತ್ಮಕ ನಾಮಫಲಕ ಅಳವಡಿಸಿದ್ದು ಇದೀಗ ವಿವಾದ ಭುಗಿಲೆದ್ದಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು ಬೋಳ ಪಂಚಾಯಿತಿ ಕಚೇರಿಗೆ ಧಾವಿಸಿ ನಾಮಫಲಕ ತೆರವುಗೊಳಿಸುವಂತೆ ಆಗ್ರಹಿಸಿದರು.

    ಮಹಾತ್ಮ ಗಾಂಧೀಜಿಯವರನ್ನು ಹತ್ಯೆಗೈದ ನಾಥೂರಾಮ್ ಗೋಡ್ಸೆಯ ಹೆಸರನ್ನು ರಸ್ತೆಗೆ ಇಡುವ ಮೂಲಕ ದೇಶದ್ರೋಹಿಯನ್ನು ವೈಭವೀಕರಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

    ಬೋಳ ಗ್ರಾಪಂ ಬಳಿಯಿರುವ ರಸ್ತೆಗೆ ಪಡುಗಿರಿ ನಾಥೂರಾಮ್ ಗೋಡ್ಸೆ ರಸ್ತೆ ಎಂದು ನಾಮಫಲಕ ಹಾಕಿರುವುದು ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದು ಖಾಸಗಿಯವರು ಹಾಕಿದ ನಾಮಫಲಕ. ಪಂಚಾಯಿತಿಯಲ್ಲಿ ಈ ಹೆಸರಿಡುವ ಬಗ್ಗೆ ಯಾವುದೇ ನಿರ್ಣಯ ಕೈಗೊಂಡಿಲ್ಲ. ಪಂಚಾಯಿತಿ ನಾಮಫಲಕ ಹಾಕಿಲ್ಲ ಎಂದು ಬೋಳ ಪಂಚಾಯಿತಿ ತಿಳಿಸಿದೆ.

    ಪೊಲೀಸರ ಆಗಮನದ ಬಳಿಕ ತೆರವು: ಈ ವಿಚಾರವಾಗಿ ಭಾರಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರ ಸಮ್ಮುಖದಲ್ಲಿ ನಾಮಫಲಕವನ್ನು ತೆರವುಗೊಳಿಸಲಾಗಿದೆ.

    ಇದು ಪಂಚಾಯಿತಿಯಿಂದ ಅಧಿಕೃತವಾಗಿ ಹಾಕಲಾದ ನಾಮಫಲಕವಲ್ಲ. ಖಾಸಗಿಯವರು ಹಾಕಿದ್ದಾರೆ. ಈ ಬಗ್ಗೆ ಪಂಚಾಯಿತಿಯವರು ಪರಿಶೀಲಿಸಿ ಅಧಿಕೃತ ವಸ್ತುಸ್ಥಿತಿಯನ್ನು ಸಾರ್ವಜನಿಕರ ಮುಂದಿಡುತ್ತಾರೆ.
    -ಸುನೀಲ್ ಕುಮಾರ್, ಸಚಿವರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts