More

    ನಗರಸಭೆಯಿಂದ ಮನೆಮನೆಗೆ ತ್ರಿವರ್ಣ ಧ್ವಜ

    ಹಾವೇರಿ: ದೇಶದಾದ್ಯಂತ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಮನೆ ಮನೆಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಆ. 13ರಿಂದ 15ವರೆಗೆ ಹಮ್ಮಿಕೊಳ್ಳಲಾಗಿದೆ. ಈ ಪ್ರಯುಕ್ತ ನಗರಸಭೆ ವತಿಯಿಂದ ರಾಷ್ಟ್ರಧ್ವಜಗಳನ್ನು ಮನೆ ಮನೆಗೆ ತಲುಪಿಸಲಾಗುತ್ತಿದೆ ಎಂದು ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಹೇಳಿದರು.

    ಸ್ಥಳೀಯ ಬಸವೇಶ್ವರ ನಗರದಲ್ಲಿ ನಗರಸಭೆ ನೇತೃತ್ವದಲ್ಲಿ ಮನೆ ಮನೆಗಳಿಗೆ ಹೋಗಿ ಧ್ವಜ ತಲುಪಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಈ ವರ್ಷ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಇರುವುದರಿಂದ ರಾಷ್ಟ್ರಾಭಿಮಾನ ಹಾಗೂ ದೇಶಪ್ರೇಮ ಬೆಳೆಸುವ ಉದ್ದೇಶದಿಂದ ಪ್ರತಿ ಮನೆ ಮನೆಗಳಲ್ಲಿ ರಾಷ್ಟ್ರದ ತ್ರಿವರ್ಣ ಧ್ವಜ ಹಾರಿಸಿ ನಾವು ಸಂಭ್ರಮಿಸಬೇಕಿದೆ. ನಗರಸಭೆ ಇದನ್ನು ಅರ್ಥಪೂರ್ಣವಾಗಿ ಆಚರಿಸಲು ನಗರಸಭೆಯ ಎಲ್ಲ ವಾರ್ಡ್​ಗಳಲ್ಲಿ ನಗರಸಭೆ ಸದಸ್ಯರ ನೇತೃತ್ವದಲ್ಲಿ ಪ್ರತಿ ಮನೆಗೆ ಹೋಗಿ ನಿಗದಿತ 25 ರೂ. ಗಳನ್ನು ಗೌರವ ಪೂರ್ವಕವಾಗಿ ಸ್ವೀಕರಿಸಿ ಭಾರತದ ತ್ರಿವರ್ಣ ಧ್ವಜ ನೀಡುವ ಕಾರ್ಯ ಮಾಡಲಾಗುತ್ತಿದೆ. ಸಾರ್ವಜನಿಕರು 25 ರೂ.ಗಳನ್ನು ನೀಡಿ ಧ್ವಜ ಖರೀದಿಸಿ ಆ. 13ರಿಂದ 15ರವರೆಗೆ ಧ್ವಜಾರೋಹಣದ ನಿಯಮಗಳನ್ನು ಪಾಲಿಸಿ ಧ್ವಜಾರೋಹಣ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ನಗರಸಭೆ ಸದಸ್ಯರು, ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts