ಕಾರಟಗಿ: ರಾಜ್ಯಮಟ್ಟದಲ್ಲಿ ಗೆದ್ದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಮಕ್ಕಳು ಆಯ್ಕೆಯಾಗಬೇಕು ಎನ್ನುವುದು ನನ್ನ ಆಶಯ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
ಇದನ್ನೂ ಓದಿ: ರಾಜೇಶ್ ರಾಷ್ಟ್ರಮಟ್ಟಕ್ಕೆ ಆಯ್ಕೆ
ಪಟ್ಟಣದ ತಮ್ಮ ಕಚೇರಿಯಲ್ಲಿ ತಾಲೂಕಿನ ಬೆನ್ನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರು ವಿಭಾಗ ಮಟ್ಟದ ಕಬಡ್ಡಿ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರಿಂದ ಸೋಮವಾರ ಸನ್ಮಾನಿಸಿ ಮಾತನಾಡಿದರು.
ಇತ್ತೀಚೆಗೆ ಕ್ರೀಡೆಗಳ ಬಗ್ಗೆ ಮಕ್ಕಳಲ್ಲಿ ವಿಶೇಷ ಆಸಕ್ತಿ ಬೆಳೆಯುತ್ತಿದೆ. ಅದಕ್ಕೆ ಶಿಕ್ಷಕರು ಮತ್ತು ಪಾಲಕರು ನಿರೇರೆದು ಪೋಷಿಸುತ್ತಿದ್ದಾರೆ. ಪ್ರತಿ ಮಗುವಿನಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಅದನ್ನು ಗುರುತಿಸುವ ಕೆಲಸ ಮಾಡಬೇಕಿದೆ. ತಾಲೂಕಿನ ಮಕ್ಕಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು ಸಂತಸ ತಂದಿದೆ ಎಂದರು.