More

    ಪುತ್ತೂರಿನ ಬಾಲಕಗೆ ರಾಷ್ಟ್ರೀಯ ಪುರಸ್ಕಾರ, ಇಂದು ಪ್ರಧಾನಿ ಜತೆ ವಿಡಿಯೋ ಸಂವಾದ

    ಮಂಗಳೂರು: 2021ನೇ ಸಾಲಿನ ಕೇಂದ್ರ ಸರ್ಕಾರದ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಆಯ್ಕೆಯಾದ ಪುತ್ತೂರಿನ ಬನ್ನೂರು ನಿವಾಸಿ ರಾಕೇಶ್ ಕೃಷ್ಣ ವಿಜ್ಞಾನ ಅನ್ವೇಷಣೆ ಕ್ಷೇತ್ರದಲ್ಲಿ ಅಮೋಘ ಸಾಧಕ.

    ಸೋಮವಾರ ಮಧ್ಯಾಹ್ನ 12.30ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಪುರಸ್ಕಾರಕ್ಕೆ ಆಯ್ಕೆಯಾದ ರಾಕೇಶ್ ಕೃಷ್ಣ ಜತೆ ಮಾತುಕತೆ ನಡೆಸಲಿದ್ದಾರೆ. ಈ ಸಂದರ್ಭ ಜಿಲ್ಲಾಡಳಿತ ಸಿದ್ಧಪಡಿಸಿದ ಆತನ ಸಾಧನೆಯ ವಿಡಿಯೋ ತುಣುಕನ್ನು ಪ್ರಧಾನಿ ವೀಕ್ಷಿಸುವರು. ಬಾಲಕನ ಕುಟುಂಬ ಸದಸ್ಯರೊಂದಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

    ಸದಾ ಹೊಸತನದ ಹುಡುಕಾಟ: ರಾಕೇಶ್ ಕೃಷ್ಣ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿ ಹಾಗೂ ಬನ್ನೂರು ನಿವಾಸಿ ರವಿಶಂಕರ್ ನೆಕ್ಕಿಲ ಮತ್ತು ಡಾ.ದುರ್ಗಾರತ್ನಾ ದಂಪತಿ ಪುತ್ರ. ಭಾರತ ಸರ್ಕಾರದ ವಿಜ್ಞಾನ ತಂತ್ರಜ್ಞಾನ ಇಲಾಖೆ ನಡೆಸಿದ ರಾಷ್ಟ್ರಮಟ್ಟದ ಇನ್‌ಸ್ಪೈರ್ ಅವಾರ್ಡ್ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಪಡೆದಿದ್ದ ಇವರು ಜಪಾನಿನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ವಿಜ್ಞಾನ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದರು. ವಿಜ್ಞಾನದ ಅನ್ವೇಷಣೆಯಲ್ಲಿ ಆಸಕ್ತಿ ಹೊಂದಿರುವ ಇವರು ಸದಾ ಹೊಸತನದ ಹುಡುಕಾಟದಲ್ಲಿ ತೊಡಗಿಸಿಕೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts