ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿ ಮರುಸ್ಥಾಪಿಸುವ ಕುರಿತು ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಜೊತೆಗೆ ಪಾಕಿಸ್ತಾನ ಇದೆ ಎಂದು ಆ ದೇಶದ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರ ಹೇಳಿಕೆಗೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ: ಸುನೀತಾ ವಿಲಿಯಮ್ಸ್ 59 ನೇ ಜನ್ಮದಿನ..ಬಾಹ್ಯಾಕಾಶ ನಿಲ್ದಾಣದಲ್ಲಿರುವ ಗಗನಯಾತ್ರಿಗೆ ಸಂಗೀತದ ಉಡುಗೊರೆ!
ಪಾಕಿಸ್ತಾನ ಏನು ಹೇಳುತ್ತದೆ ಎಂದು ನನಗೆ ಗೊತ್ತಿಲ್ಲ. ಇಷ್ಟಕ್ಕೂ ನಾನು ಪಾಕಿಸ್ತಾನಿ ಅಲ್ಲ, ಭಾರತೀಯ ಪ್ರಜೆ ಎಂದು ಪ್ರತಿಕ್ರಿಯಿಸಿದ್ದಾರೆ.
ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಹೇಳಿಕೆಗೆ ಭಾರತದಲ್ಲಿ ಕೋಲಾಹಲ ಎದ್ದಿದೆ. ಬಿಜೆಪಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಬಣ್ಣ ಬಯಲಾಗಿದೆ ಎಂದು ದೂರುತ್ತಿದೆ.
ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್, ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ 370 ನೇ ವಿಧಿಯನ್ನು ಮರುಸ್ಥಾಪಿಸಬಹುದು ಎಂದು ಹೇಳಿದ್ದರು.
ಪಾಕಿಸ್ತಾನದ ರಕ್ಷಣಾ ಸಚಿವರಿಗೆ ಸಂಬಂಧಿಸಿದಂತೆ, ಬಿಜೆಪಿ ನಾಯಕ ಅಮಿತ್ ಮಾಳವಿಯಾ ಎಕ್ಸ್‌ನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದು, ಪಾಕಿಸ್ತಾನ ಭಯೋತ್ಪಾದಕ ರಾಷ್ಟ್ರವಾಗಿದ್ದು, ಕಾಶ್ಮೀರದ ಬಗ್ಗೆ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್‌ನ ನಿಲುವನ್ನು ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.
ಅರ್ಧರಾತ್ರೀಲಿ ಸಲ್ಮಾನ್ ಖಾನ್ಗೆ ಎದುರಾಯ್ತು ಆತಂಕ! ‘ಭಾಯಿಜಾನ್’ ಕಾರ್ ಬೆನ್ನಟ್ಟಿ ಬಂದ ಯುವಕ..ಆಮೇಲೇನಾಯ್ತು?