ರಾಷ್ಟ್ರೀಯ ಗ್ರಾಹಕ ದಿನಾಚರಣೆ ಕಾರ್ಯಕ್ರಮ

rrrrr
Published on


ಮಂಗಳೂರು : ದ.ಕ.ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ವತಿಯಿಂದ ಜಿಲ್ಲಾ ರಾಷ್ಟ್ರೀಯ ಗ್ರಾಹಕ ದಿನಾಚರಣೆ ಕಾರ್ಯಕ್ರಮ
ನಗರದ ಬಿಜೈಯ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದಲ್ಲಿ ಮಂಗಳವಾರ ನಡೆಯಿತು.
ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಕಾನೂನು ಸಲಹೆಗಾರ ರಾಘವೇಂದ್ರ ರಾವ್ ರಾಷ್ಟ್ರೀಯ ಗ್ರಾಹಕ ದಿನಾಚರಣೆಯ
ಮಹತ್ವ ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ.ಜೆ.ಸಾಲ್ಯಾನ್ ಗ್ರಾಹಕರ ಹಕ್ಕು ಬಾಧ್ಯತೆಗಳ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟದ ಖಜಾಂಚಿ, ಜಯಪ್ರಕಾಶ್, ಮಂಗಳೂರು ಉತ್ತರ ವಿಭಾಗದ ಇನ್ನರ್ ವೀಲ್ ಕ್ಲಬ್‌ನ ಸದಸ್ಯರಾದ ವಸಂತಿ ಕಾಮತ್, ಶೀಲ ಜಯಪ್ರಕಾಶ್ ಉಪಸ್ಥಿತರಿದ್ದರು. ಒಕ್ಕೂಟದ ಉಪಾಧ್ಯಕ್ಷ ಎಡ್ವಿನ್ ಡಿಮೆಲ್ಲೊ ಸ್ವಾಗತಿಸಿ, ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟದ ಕಾರ್ಯಾಧ್ಯಕ್ಷ ರಫೀಕ್ ಕುಕ್ಕಾಡಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net