More

  ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಉದ್ಘಾಟನೆ

  ಬೆಂಗಳೂರು:
  ಮಹದೇವಪುರ ಕ್ಷೇತ್ರದ ಬಿದರಹಳ್ಳಿಯ ಈಸ್ಟ್ ಪಾಯಿಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವವನ್ನು ಸಂಸ್ಥೆಯ ಅಧ್ಯಕ್ಷರಾದ ರಮಾದೇವಿ ವೆಂಕಟಪತಿ ಉದ್ಘಾಟಿಸಿದರು.
  ಸಂಸ್ಥೆಯ ಹಿರಿಯ ಉಪಾಧ್ಯಕ್ಷರಾದ ಡಾ.ಎಸ್.ವಿ.ಪ್ರಕಾಶ್, ಮಾತನಾಡಿ, ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಜೀವನದ ಅವಿಭಾಜ್ಯ ಅಂಗ. ಆದ್ದರಿಂದ ಈ
  ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಕ್ರೀಯಾಶೀಲತೆ ಬೆಳೆಸಿಕೊಳ್ಳಬೇಕು ಎಂದರು. ಈ ಸಾಂಸ್ಕೃತಿಕ ಉತ್ಸವದಲ್ಲಿ ದೇಶದ 150 ಕ್ಕಿಂತ ಹೆಚ್ಚಿನ ಕಾಲೇಜುಗಳಿಂದ 5000 ವಿದ್ಯಾರ್ಥಿಗಳು ವಿವಿಧ ಭಾಗಗಳಿಂದ ಭಾಗವಹಿಸಿದ್ದರು,
  ಸಂಸ್ಥೆಯ ಸಿಇಓ ಪ್ರಮೋದ್ ಗೌಡ ಮತ್ತು ರಾಜೀವ್‌ಗೌಡ, ಹಾಗೂ ಕಾರ್ಯದರ್ಶಿಗಳಾದ ಪೀಟರ್ ಫ್ರಾನ್ಸಿಸ್, ಪ್ರಾಂಶುಪಾಲರುಗಳಾದ ಡಾ. ಮೃತ್ಯುಂಜಯ. ವಿ. ಲಟ್ಟೆ ಡಾ, ಪ್ರಭಾಕರ್, ಡಾ ರಾಜೇಶ್ವರಿ, ಹಾಗೂ ವಿಭಾಗದ ಮುಖ್ಯಸ್ಥರುಗಳು, ಪ್ರಾಧ್ಯಾಪಕರು ವೇದಿಕೆಯಲ್ಲಿದ್ದರು.
  ಸಂಸ್ಕೃತಿ ಉತ್ಸವದಲ್ಲಿ ವಿವಿಧ ಭಾಗಗಳಿಂದ ಬಂದಿದ್ದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು. ಸಾವಿರಾರು ಪ್ರೇಕ್ಷಕರಿಂದ ಸಭಾಂಗಣ ತುಂಬಿತ್ತು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts