More

    ರಾಷ್ಟ್ರೀಯ ವೈದ್ಯರ ದಿನ : ಐಎಂಎ ಕಾರ್ಯಕ್ರಮದಲ್ಲಿ ಮೋದಿ ಮಾತು

    ನವದೆಹಲಿ : ನಾಳೆ ಆಚರಿಸಲಾಗುವ ರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ವೈದ್ಯ ಸಮುದಾಯವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇಂಡಿಯನ್ ಮೆಡಿಕಲ್ ಅಸೋಸಿಯೇಷನ್(ಐಎಂಎ) ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮಧ್ಯಾಹ್ನ 3 ಗಂಟೆಗೆ ಮೋದಿ ಅವರು ಭಾಷಣ ಮಾಡಲಿದ್ದಾರೆ.

    ಖ್ಯಾತ ವೈದ್ಯ ಮತ್ತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬಿಧನ್ ಚಂದ್ರ ರಾಯ್ ಅವರ ಜನ್ಮದಿನ ಮತ್ತು ಮರಣ ದಿನ ಎರಡೂ ಜುಲೈ 1 ಕ್ಕೆ ಸಲ್ಲುವುದರಿಂದ, ಈ ದಿನವನ್ನು ಡಾಕ್ಟರ್ಸ್​ ಡೇ ಆಗಿ ಆಚರಿಸಲಾಗುತ್ತದೆ. ಕಳೆದ ವರ್ಷದಿಂದ ಹಬ್ಬಿರುವ ಕರೊನಾ ಸಾಂಕ್ರಾಮಿಕವನ್ನು ಎದುರಿಸುವಲ್ಲಿ ವೈದ್ಯರ ಪ್ರಯಾಸದ ಬಗ್ಗೆ ಭಾರತ ಹೆಮ್ಮೆ ಪಡುತ್ತದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. (ಏಜೆನ್ಸೀಸ್)

    ಪ್ರಿಯಾಂಕಾ ಗಾಂಧಿಯೊಂದಿಗೆ ನವಜೋತ್​ ಸಿಂಗ್​ ಸಿಧು ಸುದೀರ್ಘ ಸಭೆ

    ಐಸ್​ಕ್ರೀಂನಲ್ಲಿ ಇಲಿ ಪಾಷಾಣ ಬೆರೆಸಿದ ಕಿರಾತಕ! ಗಂಡಹೆಂಡತಿ ಜಗಳಕ್ಕೆ ಮಕ್ಕಳಿಗೆ ಸಜೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts