ಉಜಿರೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಉಪನ್ಯಾಸ

New Project (3)
Published on

ಬೆಳ್ತಂಗಡಿ: ಉಜಿರೆ ಶ್ರೀ ಧ.ಮ. ಇಂಜಿನಿಯರಿಂಗ್ ಕಾಲೇಜು (ಎಸ್‌ಡಿಎಂಐಟಿ) ನಲ್ಲಿ ಕೊಯಮತ್ತೂರಿನ ಎನ್‌ಜಿಐ ಸಂಸ್ಥೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಚ್.ಎನ್.ನಾಗರಾಜ್ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ), ಎನ್‌ಎಎಸಿ ನೂತನ ಬೈನರಿ ಮೌಲ್ಯಮಾಪನ ವ್ಯವಸ್ಥೆ ಕುರಿತು ಉಪನ್ಯಾಸ ನೀಡಿದರು.

ಎಸ್‌ಡಿಎಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ.ಸತೀಶ್ಚಂದ್ರ, ಶೈಕ್ಷಣಿಕ ಸಂಯೋಜಕ ಪ್ರೊ.ಎಸ್.ಎನ್.ಕಾಕತ್ಕರ್, ಎಸ್‌ಡಿಎಂಐಟಿ ಉಜಿರೆ, ಎಸ್‌ಡಿಎಂ ಪಿಜಿ ಸೆಂಟರ್, ಎಸ್‌ಡಿಎಂ ಪದವಿ ಕಾಲೇಜಿನ ಅಧ್ಯಾಪಕರು ಉಪಸ್ಥಿತರಿದ್ದರು. ಪ್ರಾಚಾರ್ಯ ಡಾ.ಅಶೋಕ್ ಕುಮಾರ್ ಸ್ವಾಗತಿಸಿದರು. ಮೆಕಾನಿಕಲ್ ವಿಭಾಗ ಮುಖ್ಯಸ್ಥ ಡಾ.ಗಿರೀಶ್ ಕುಮಾರ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net