More

    ಮನೆ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ, ಸಿದ್ಧತೆಗೆ ದ.ಕ.ಜಿಲ್ಲಾಧಿಕಾರಿ ಸೂಚನೆ

    ಮಂಗಳೂರು: ಸ್ವಾತಂತ್ರೃದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆ.13ರಿಂದ 15 ರವರೆಗೆ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಕಾರ್ಯಕ್ರಮದಡಿ ಮನೆಗಳ ಮೇಲೆ ರಾಷ್ಟ್ರ ಧ್ವಜ ಹಾರಿಸಿ, ರಾಷ್ಟ್ರಪ್ರೇಮ ಅಭಿವ್ಯಕ್ತಿಗೊಳಿಸಲು ಅನುಕೂಲವಾಗುವಂತೆ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಗ್ರಾಮೀಣ ಭಾಗದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪೂರಕವಾದ ಕ್ರಮಗಳನ್ನು ಕೈಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆ.13 ರಿಂದ 15ರ ವರೆಗೆ ಜಿಲ್ಲೆಯಲ್ಲಿರುವ ಎಲ್ಲ ಮನೆಗಳ ಮೇಲೂ ರಾಷ್ಟ್ರಧ್ವಜ ಹಾರಿಸಲು ಅನುಕೂಲವಾಗುವಂತೆ ಧ್ವಜಗಳನ್ನು ಸರಬರಾಜು ಮಾಡಬೇಕಿದ್ದು, ಈ ದಿಸೆಯಲ್ಲಿ ಅಗತ್ಯ ಕ್ರಮ ವಹಿಸಲಾಗಿದೆ. ಮುಖ್ಯವಾಗಿ ಎನ್.ಆರ್.ಎಲ್.ಎಂ. ಮೂಲಕ ಸ್ವಸಹಾಯ ಸಂಘಗಳ ಸದಸ್ಯರಿಗೆ ಧ್ವಜ ಸಿದ್ದಪಡಿಸಿ ನೀಡುವ ಆದೇಶ ನೀಡಲಾಗಿದೆ. ಅದರಂತೆ ಅವರು ಧ್ವಜ ಸಿದ್ದಪಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕವೂ ಧ್ವಜಗಳ ಸರಬರಾಜಾಗುತ್ತಿದ್ದು, ಅವುಗಳನ್ನು ವಿತರಿಸಲು ಅನುಕೂಲವಾಗುವಂತೆ ತಾಲೂಕು ಮಟ್ಟದಲ್ಲಿ ತಹಸಿಲ್ದಾರರು ಸಭೆ ನಡೆಸುವಂತೆ ತಿಳಿಸಿದರು.

    ಸರ್ಕಾರದ ಎಲ್ಲ ಕಚೇರಿಗಳು, ಸರ್ಕಾರೇತರ ಕಚೇರಿಗಳು, ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಕಡ್ಡಾಯವಾಗಿ ರಾಷ್ಟ್ರಧ್ವಜ ಹಾರಾಡಬೇಕು. ಅದೇ ರೀತಿ ರೈಲು ನಿಲ್ದಾಣಗಳು, ವಿಮಾನ ನಿಲ್ದಾಣ, ವಿದ್ಯಾರ್ಥಿ ನಿಲಯಗಳು, ವಾಣಿಜ್ಯ ಸಂಕಿರ್ಣಗಳು ಸೇರಿದಂತೆ ಎಲ್ಲೆಡೆ ಧ್ವಜಾರೋಹಣವಾಗಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts