ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

udp-24-dho ofc
Published on

ಉಡುಪಿ: ಹೆಣ್ಣು ಮಕ್ಕಳನ್ನು ಸಮಾಜದಲ್ಲಿ ಆತ್ಮಸ್ಥೈರ್ಯದಿಂದ ಬದುಕಲು ಮಾನಸಿಕವಾಗಿ ಸದೃಢವಾಗಿರುವಂತೆ ಬೆಳೆಸಬೇಕೆಂದು ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶ್ರೀರಾಮ ರಾವ್​.ಕೆ ಹೇಳಿದರು.

ಶುಕ್ರವಾರ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಕಚೇರಿ ಮಹಿಳಾ ಉದ್ಯೋಗಿಗಳಿಗೆ ಹಮ್ಮಿಕೊಂಡಿದ್ದ ವಿವಿಧ ಆಟೋಟ ಸ್ಪರ್ಧೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಡಾ.ಲತಾ ನಾಯಕ್​ ಮಾತನಾಡಿ, ಮನೆಯಲ್ಲಿ ಹೆಣ್ಣು ಮಕ್ಕಳಿಗೆ ಮಾತ್ರ ಉತ್ತಮ ನಡವಳಿಕೆಗಳ ಬಗ್ಗೆ ತಿಳುವಳಿಕೆ ನೀಡುವುದು ಮಾತ್ರವಲ್ಲದೆ ಗಂಡು ಮಕ್ಕಳಿಗೂ ಸಹ ಉತ್ತಮ ಸಂಸ್ಕಾರ ನೀಡಿ ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಗೌರವ ಹಾಗೂ ರಕ್ಷಣೆ ನೀಡುವ ಬಗ್ಗೆ ತಿಳಿಹೇಳಬೇಕು ಎಂದರು.

ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗರತ್ನ ಅಧ್ಯಕ್ಷತೆ ವಹಿಸಿದ್ದರು. ದೀಪಾ ಕೆ. ಶೆಟ್ಟಿ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಜಿಲ್ಲಾ ಆರ್​ ಸಿ ಎಚ್​ ಅಧಿಕಾರಿ ಡಾ.ಜ್ಯೋತ್ಸ್ನಾ ಬಿ.ಕೆ. ಉಪಸ್ಥಿತರಿದ್ದರು. ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ನಿರೂಪಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್​ ಸ್ವಾಗತಿಸಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net