More

    ರಾಷ್ಟ್ರೀಯ ಹೆದ್ದಾರಿಯಲ್ಲಿಲ್ಲ ಸೂಚನಾ ಫಲಕ ಸ್ಥಳೀಯರಿಂದ ಮನವಿ ಪ್ರಯಾಣಿಕರು, ಪ್ರವಾಸಿಗರಲ್ಲಿ ಗೊಂದಲ

    ವಿಜಯವಾಣಿ ಸುದ್ದಿಜಾಲ ಗಂಗೊಳ್ಳಿ

    ಉಡುಪಿ ಜಿಲ್ಲೆಯ ಪ್ರಮುಖ ಮೀನುಗಾರಿಕಾ ಬಂದರು ಪ್ರದೇಶವಾಗಿರುವ ಗಂಗೊಳ್ಳಿಯನ್ನು ರಾಷ್ಟ್ರೀಯ ಹೆದ್ದಾರಿ ಮೂಲಕ ಸಂಪರ್ಕಿಸುವ ಸ್ಥಳದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಚನಾ ಫಲಕ ಅಳವಡಿಸಿದೆ. ಆದರೆ ಜಿಲ್ಲೆಯ ಅತ್ಯಂತ ಪ್ರಮುಖ ಪ್ರದೇಶವಾಗಿರುವ ಗಂಗೊಳ್ಳಿಯಲ್ಲಿ ಸೂಚನಾ ಫಲಕ ಅಳವಡಿಕೆಯಾಗದ ಬಗ್ಗೆ ಜನರು ಪ್ರಶ್ನಿಸುತ್ತಿದ್ದಾರೆ.

    ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪ್ರಮುಖ ಪ್ರದೇಶ ಹಾಗೂ ಸ್ಥಳಗಳನ್ನು ಸಂಪರ್ಕಿಸುವ ಕಡೆಗಳಲ್ಲಿ ಪ್ರಾಧಿಕಾರ ಸೂಚನಾ ಫಲಕ ಅಳವಡಿಸಿತ್ತು. ಆದರೆ ಪ್ರಮುಖ ಮೀನುಗಾರಿಕಾ ಬಂದರು ಗಂಗೊಳ್ಳಿಗೆ ಸಂಪರ್ಕಿಸುವ ಮುಳ್ಳಿಕಟ್ಟೆ ಮತ್ತು ತ್ರಾಸಿಯಲ್ಲಿ ಯಾವುದೇ ಸೂಚನಾ ಫಲಕ ಅಳವಡಿಸಿರಲಿಲ್ಲ.

    ಗಂಗೊಳ್ಳಿಗೆ ಬರುವ ಬೇರೆ ಊರಿನ ಹಾಗೂ ರಾಜ್ಯದ ಜನರು ತೊಂದರೆ ಅನುಭವಿಸುತ್ತಿದ್ದರು. 2-3 ವರ್ಷಗಳಿಂದ ಗಂಗೊಳ್ಳಿ ಗ್ರಾಪಂ ಅನೇಕ ಬಾರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮತ್ತು ಸ್ಥಳೀಯ ಜನಪ್ರತಿನಿಧಿಗಳಿಗೆ ಪತ್ರ ಮುಖೇನ ಸೂಚನಾ ಫಲಕ ಅಳವಡಿಕೆ ಸಂಬಂಧ ಮನವಿ ಮಾಡುತ್ತಲೇ ಬಂದಿತ್ತು. ಆದರೆ ಸೂಚನಾ ಫಲಕ ಅಳವಡಿಕೆ ಬಗ್ಗೆ ಯಾವುದೇ ಸ್ಪಂದನೆ ದೊರೆತಿರಲಿಲ್ಲ.

    ಗಂಗೊಳ್ಳಿ ಜನರ ಬೇಡಿಕೆಗೆ ಸ್ಪಂದಿಸಿದ ಗಂಗೊಳ್ಳಿ ರೋಟರಿ ಕ್ಲಬ್ ಮುಳ್ಳಿಕಟ್ಟೆಯಲ್ಲಿ ಸೂಚನಾ ಫಲಕ ಅಳವಡಿಸಿತ್ತು. ಇದಾದ ಕೆಲವೇ ತಿಂಗಳಲ್ಲಿ ಸಂಬಂಧಪಟ್ಟ ಇಲಾಖೆ ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಮತ್ತು ತ್ರಾಸಿಯಲ್ಲಿ ಸೂಚನಾ ಫಲಕ ಅಳವಡಿಸಿದೆ. ಇದರಿಂದ ಅನೇಕ ವರ್ಷಗಳಿಂದ ಗಂಗೊಳ್ಳಿ ಸಂಪರ್ಕದ ಬಗ್ಗೆ ಗೊಂದಲಕ್ಕೆ ಒಳಗಾಗುತ್ತಿದ್ದ ಪ್ರಯಾಣಿಕರ ಹಾಗೂ ಪ್ರವಾಸಿಗರ ಬವಣೆ ತಪ್ಪಿದಂತಾಗಿದೆ.

    ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಮತ್ತು ತ್ರಾಸಿಯಲ್ಲಿ ಯಾವುದೇ ಸೂಚನಾ ಫಲಕ ಇಲ್ಲದಿರುವುದರಿಂದ ಪ್ರಯಾಣಿಕರು ಹಾಗೂ ಪ್ರವಾಸಿಗರು ಗೊಂದಲಕ್ಕೆ ಒಳಗಾಗುತ್ತಿದ್ದರು. ಈ ಪ್ರದೇಶದಲ್ಲಿ ಸೂಚನಾ ಫಲಕ ಅಳವಡಿಸುವಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಜನರ ಬೇಡಿಕೆಯಂತೆ ರಾಷ್ಟ್ರೀಯ ಹೆದ್ದಾರಿಯ ಎರಡು ಪ್ರಮುಖ ಸ್ಥಳದಲ್ಲಿ ಸೂಚನಾ ಫಲಕ ಅಳವಡಿಸಿದೆ.
    ಶ್ರೀನಿವಾಸ ಖಾರ್ವಿ, ಮಾಜಿ ಅಧ್ಯಕ್ಷರು, ಗ್ರಾಪಂ ಗಂಗೊಳ್ಳಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts