ನ್ಯಾಷನಲ್​ ಹೆರಾಲ್ಡ್​​ ಪ್ರಕರಣ; ಸೋನಿಯಾ, ರಾಹುಲ್​ಗೆ ಬಿಗ್​ಶಾಕ್​!; 661 ಕೋಟಿ ರೂ. ಆಸ್ತಿ ಸ್ವಾಧೀನಕ್ಕೆ ಮುಂದಾದ ED

dk - 2025-04-12T184924.033
Published on

ED : ನ್ಯಾಷನಲ್​ ಹೆರಾಲ್ಡ್​ನ ಹಣ ವರ್ಗಾವಣೆ ಪ್ರಕರಣದಲ್ಲಿ ಇದೀಗ ಕಾಂಗ್ರೆಸ್​ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್​ ಗಾಂಧಿಗೆ ಸಂಕಷ್ಟಕ್ಕೆ ಎದುರಾಗಿದೆ.

ಕಾಂಗ್ರೆಸ್​ ನಿಯಂತ್ರಿತ ಅಸೋಸಿಯೇಟೆಡ್​ ಜರ್ನಲ್ಸ್​ ಲಿಮಿಡೆಟ್(ಎಲ್​ಜೆಎಲ್​)​ ವಿರುದ್ಧದ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ಜಪ್ತಿ ಮಾಡಲಾದ 661 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಜಾರಿ ನಿರ್ದೇಶನಾಲಯ(ಇಡಿ) ಶನಿವಾರ ನೋಟಿಸ್​ ಜಾರಿ ಮಾಡಿದೆ.

ದೆಹಲಿಯ ಐಟಿಒನಲ್ಲಿರುವ ಹೆರಾಲ್ಡ್ ಹೌಸ್, ಮುಂಬೈನ ಬಾಂದ್ರಾ ಪ್ರದೇಶದ ಆವರಣ ಮತ್ತು ಲಕ್ನೋದ ಬಿಶೇಶ್ವರ್ ನಾಥ್ ರಸ್ತೆಯಲ್ಲಿರುವ ಎಜೆಎಲ್ ಕಟ್ಟಡಗಳ ಗೋಡೆಗಳ ಮೇಲೆ ಶುಕ್ರವಾರ ಈ ಕುರಿತಂತೆ ನೋಟಿಸ್​ ಅಂಟಿಸಲಾಗಿದೆ ಎಂದು ವರದಿಯಾಗಿದೆ.

ಈ ಪ್ರಕರಣವು ನ್ಯಾಷನಲ್ ಹೆರಾಲ್ಡ್ ಪ್ರಕರಣ ಎಂದೇ ಪ್ರಸಿದ್ಧವಾಗಿದ್ದು, ಇದರಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ.

ಏನಿದು ನ್ಯಾಷನಲ್ ಹೆರಾಲ್ಡ್ ಪ್ರಕರಣ..?

2014ರಲ್ಲಿ ಎಜೆಎಲ್ ಮತ್ತು ಅದರ ಹೋಲ್ಡಿಂಗ್ ಕಂಪನಿ ಯಂಗ್ ಇಂಡಿಯನ್ ವಿರುದ್ಧ ಇಡಿ ಹಣ ವರ್ಗಾವಣೆ ಪ್ರಕರಣ ದಾಖಲಾಗಿದೆ. ನ್ಯಾಷನಲ್ ಹೆರಾಲ್ಡ್ ಅನ್ನು ಎಜೆಎಲ್ ಪ್ರಕಟಿಸುತ್ತದೆ ಮತ್ತು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದೆ. ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಯಂಗ್ ಇಂಡಿಯನ್‌ನ ಬಹುಪಾಲು ಷೇರುದಾರರಾಗಿದ್ದು, ಪ್ರತಿಯೊಬ್ಬರೂ ಶೇ. 38 ರಷ್ಟು ಷೇರುಗಳನ್ನು ಹೊಂದಿದ್ದಾರೆ ಎಂದು ಇಡಿ ಕಂಡುಕೊಂಡಿದೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net