More

    ಮೂರನೇ ಸುತ್ತಿನ ವಿಚಾರಣೆ; ನಾಳೆ ಮತ್ತೆ ಹಾಜರಾಗುವಂತೆ ಸೋನಿಯಾ ಗಾಂಧಿಗೆ ಇಡಿ ಸಮನ್ಸ್

    ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಎರಡನೇ ಸಲ ವಿಚಾರಣೆಗೊಳಪಟ್ಟಿರುವ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ನಾಳೆ ಸಹ ಹಾಜರಾಗಲು ಇಡಿ ತಿಳಿಸಿದೆ.

    ಇಂದು ನಡೆದ ಆರು ಗಂಟೆಗಳ ವಿಚಾರಣೆ ವೇಳೆ ಸುಮಾರು 55ಕ್ಕೂ ಹೆಚ್ಚಿನ ಪ್ರಶ್ನೆ ಅವರಿಗೆ ಕೇಳಲಾಗಿದೆ ಎಂದು ಹೇಳಲಾಗ್ತಿದೆ. ಇಂದು ಎರಡನೇ ಸುತ್ತಿನ ವಿಚಾರಣೆಗೆ ಸೋನಿಯಾ ಗಾಂಧಿ ಇಡಿ ಮುಂದೆ ಹಾಜರಾಗಿದ್ದರು. ಅವರ ಜೊತೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಕೂಡ ಇದ್ದರು.

    ಪ್ರಕರಣದ ಹಿನ್ನೆಲೆ: ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನಿಂದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ನ ಅಕ್ರಮ ಹಣ ವರ್ಗಾವಣೆ ಕುರಿತು ಇಡಿ ತನಿಖೆ ನಡೆಸುತ್ತಿದೆ. ಈ ಸಂಸ್ಥೆಯಲ್ಲಿ ಸೋನಿಯಾ ಗಾಂಧಿ ಶೇ. 38 ರಷ್ಟು ಷೇರುಗಳನ್ನು ಹೊಂದಿದ್ದಾರೆ ಮತ್ತು ನಿರ್ದೇಶಕರಾಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಜಾರಿ ನಿರ್ದೇಶನಾಲಯ ಕಚೇರಿಗೆ ಆಗಮಿಸಿದ್ದ ಸೋನಿಯಾ ಗಾಂಧಿ ಆರು ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದು, ಅಧಿಕಾರಿಗಳು ಕೇಳಿರುವ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಇದರ ಬೆನ್ನಲ್ಲೇ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸೋನಿಯಾ ಗಾಂಧಿಗೆ ನೋಟಿಸ್ ನೀಡಿದ್ದಾಗಿ ತಿಳಿದು ಬಂದಿದ್ದು, ನಾಳೆ ಮತ್ತೆ ಆಗಮಿಸಲಿದ್ದಾರೆ.

    ಜುಲೈ 21ರಂದು ಮೊದಲ ಸುತ್ತಿನ ವಿಚಾರಣೆ ಎದುರಿಸಿರುವ ಸೋನಿಯಾ ಗಾಂಧಿ, ಇಂದು ಎರಡನೇ ಸುತ್ತಿನ ವಿಚಾರಣೆಗೆ ಹಾಜರಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಹುಲ್ ಗಾಂಧಿ ಸಹ ಜಾರಿ ನಿರ್ದೇಶನಾಲಯದಿಂದ ವಿಚಾರಣೆಗೊಳಪಟ್ಟಿದ್ದಾರೆ. ಹೆಚ್ಚುವರಿ ನಿರ್ದೇಶಕಿ ಮೋನಿಕಾ ಶರ್ಮಾ ನೇತೃತ್ವದ ತಂಡವು ಸೋನಿಯಾ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿದೆ.

    ಕಾಂಗ್ರೆಸ್ ಅಧಿನಾಯಕಿಯನ್ನ ವಿಚಾರಣೆಗೊಳಪಡಿಸಿರುವುದನ್ನ ಖಂಡಿಸಿ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದರು. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್​​ನ 50 ಸಂಸದರು, ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಠಾಣೆಗೆ ಕರೆದೊಯ್ಯಲಾಗಿತ್ತು.

    VIDEO: ಎಲ್ಲೂ ನೋಡಿರದ ಪ್ರಕೃತಿಯ ಅಪರೂಪದ ಕ್ಷಣ: ಕಣಿವೆಗಳ ಮೇಲೆ ತೇಲುತ್ತಿರುವ ಮೋಡಗಳ ದೃಶ್ಯ ಹಂಚಿಕೊಂಡ ಸಚಿವ!

    ಲಾಕ್​ಡೌನ್​ ವೇಳೆ ತಾನೇ ತಯಾರಿಸಿದ ವಿಮಾನದಲ್ಲಿ ಕುಟುಂಬ ಸಮೇತ ಯೂರೋಪ್​ ಸುತ್ತಿಬಂದ ಇಂಜಿನಿಯರ್!

    ಲಾಕ್​ಡೌನ್​ ವೇಳೆ ತಾನೇ ತಯಾರಿಸಿದ ವಿಮಾನದಲ್ಲಿ ಕುಟುಂಬ ಸಮೇತ ಯೂರೋಪ್​ ಸುತ್ತಿಬಂದ ಇಂಜಿನಿಯರ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts