ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

blank

ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಧಾನಗತಿಯಲ್ಲಿ ನಡೆಯುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಕಾಮಗಾರಿಯ ವೇಗದ ಮಿತಿ ಹೆಚ್ಚಿಸಿ, ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.

ಗುರುವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 66, 169 ಹಾಗೂ 169ಎ ಕಾಮಗಾರಿ ಪ್ರಗತಿಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಂತೆಕಟ್ಟೆ ಅಂಡರ್​ಪಾಸ್​ ಕಾಮಗಾರಿಗಳನ್ನು ಮಾರ್ಚ್​ ತಿಂಗಳ ಮುಂಚಿತವಾಗಿ ಸಂಪೂರ್ಣವಾಗಿ ಮುಗಿಸಬೇಕು ಎಂದು ಸೂಚನೆ ನೀಡಿದರು. ಕರಾವಳಿ ಜಂಕ್ಷನ್​ನಿಂದ ಮಲ್ಪೆವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಅಗತ್ಯವಿರುವ ಭೂಮಿಯ ಸ್ವಾಧಿನ ಪ್ರಕ್ರಿಯೆ ವಿಳಂಬವಾಗುತ್ತಿದೆ. ಭೂಮಿಯ ಮಾಲೀಕರಿಗೆ ವೈಜ್ಞಾನಿಕವಾಗಿ ಪರಿಹಾರದ ಮೊತ್ತವನ್ನು ಆದ್ಯತೆಯ ಮೇಲೆ ನೀಡಬೇಕು. ಶ್ರೀದಲ್ಲಿ ಭೂಮಿಯನ್ನು ಸ್ವಾಧಿನಪಡಿಸಿಕೊಂಡು ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಧಿಕಾರಿಗಳೇ ಹೊಣೆ
ಭೂ ಸ್ವಾಧಿನ ಪ್ರಕ್ರಿಯೆಯ ವಿಳಂಬದಿಂದಾಗಿ ಹೆದ್ದಾರಿ ಕಾಮಗಾರಿ ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ರಾಜ್ಯ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಪ್ರತಿ ಹದಿನೈದು ದಿನಕ್ಕೆ ಸಭೆ ಕರೆದು ಮಾಹಿತಿ ಪಡೆಯುತ್ತಿದ್ದಾರೆ. ಹೀಗಾಗಿ ಭೂಸ್ವಾಧಿನ ಪ್ರಕ್ರಿಯೆ ಕಾರ್ಯ ನಿರೀಕ್ಷಿತ ಮಟ್ಟದಲ್ಲಿ ನಡೆಯದಿದ್ದರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಮುಂದಿನ ಹತ್ತು ದಿನಗಳ ಒಳಗಾಗಿ ಸ್ವಾಧಿನ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದರು.

ಸಮನ್ವಯದಿಂದ ಕಾರ್ಯನಿರ್ವಹಿಸಿ
ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ನಿಮಾರ್ಣಕ್ಕೆ ಕಬ್ಬಿಣದ ಗರ್ಡಲ್ಸ್​ನ ಅಳವಡಿಕೆ ಕಾರ್ಯವೂ ಮಂದಗತಿಯಲ್ಲಿದೆ. ಡಿ.25 ರ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿತ್ತು. ರಾಷ್ಟ್ರೀಯ ಹೆದ್ದಾರಿ ಅಭಿಯಂತರರು ಹಾಗೂ ರೈಲ್ವೇ ಇಲಾಖೆಯ ಅಭಿಯಂತರರು ಪರಸ್ಪರ ಜವಾಬ್ದಾರಿಯಿಂದ ನುಚಿಕೊಳ್ಳುವುದು ಸರಿಯಲ್ಲ. ಕಾಮಗಾರಿಯ ಪ್ರಗತಿಯ ವೇಗವನ್ನು ಹೆಚ್ಚಿಸಲು ಎರಡೂ ಇಲಾಖೆಯ ಅಧಿಕಾರಿಗಳೂ ಸಮನ್ವಯದೊಂದಿಗೆ ಕಾರ್ಯನಿವಹಿಸಬೇಕು ಎಂದು ತಿಳಿಸಿದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್​ ಬಾಯಲ್​, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ. ಅರುಣ್​ ಕೆ, ಡಿಎಫ್​ಓ ಗಣಪತಿ ಹಾಗೂ ವೈಲ್ಡ್​ಲೈಫ್​ ಡಿ.ಎಫ್​.ಓ ಶಿವರಾಮ ಎಂ ಬಾಬು, ಸಹಾಯಕ ಕಮೀಷನರ್​ ಮಹೇಶ್ಚಂದ್ರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್​ ಅಜ್ಮಿ, ಶೃಂಗೇರಿ&-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಮಂಜುನಾಥ್​, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್​ ಬಿ, ಉಪಸ್ಥಿತರಿದ್ದರು.

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…