25.9 C
Bengaluru
Wednesday, January 22, 2020

ಆಕ್ಷೇಪಣೆ ಬಳಿಕವೂ ಮರ ತೆರವು

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ವಿಸ್ತರಣೆ ಕಾಮಗಾರಿ ಕರಾವಳಿ ಬೈಪಾಸ್‌ನಿಂದ ಪರ್ಕಳವರೆಗೆ ಹಲವು ಮರಗಳನ್ನು ಸಾರ್ವಜನಿಕ ಆಕ್ಷೇಪಣೆ ನಡುವೆ ತೆರವುಗೊಳಿಸಲಾಗಿದೆ.
ಇತ್ತೀಚೆಗೆ ಕರಾವಳಿ ಬೈಪಾಸ್‌ನಿಂದ ಪರ್ಕಳದವರೆಗೆ ಹೆದ್ದಾರಿ ವಿಸ್ತರಣೆ ಕಾಮಗಾರಿಗಾಗಿ 140 ಮರಗಳ ತೆರವು ಸಂಬಂಧಿಸಿ ಆದಿ ಉಡುಪಿ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಾರ್ವಜನಿಕ ಅಹವಾಲು ಸಭೆ ನಡೆದಿತ್ತು. ಸಭೆಯಲ್ಲಿ ಅರಣ್ಯ ಇಲಾಖೆ ಅನುಮತಿ ಪಡೆಯದೇ ಅಕ್ರಮವಾಗಿ ಮರಗಳನ್ನು ತೆರವು ಮಾಡಿರುವ ವಿಚಾರ ತಿಳಿದು ಬಂದಿತ್ತು. ಸಭೆಯಲ್ಲಿ ಅರಣ್ಯ ಇಲಾಖೆ ಅವರ ವಿರುದ್ಧ ಆಕ್ರೋಶ ವ್ಯಕ್ತಗೊಂಡು. ಎನ್‌ಎಚ್ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಮತ್ತು ಮರಗಳ ಸುರಕ್ಷಿತ ಸ್ಥಳಾಂತರಕ್ಕೆ ಒತ್ತಾಯಿಸಲಾಗಿತ್ತು. ಈ ಚರ್ಚೆ ಮತ್ತು ಪ್ರಕ್ರಿಯೆ ನಡೆಯುತ್ತಿರುವಾಗಲೆ ರಾತ್ರೋರಾತ್ರಿ ಮಣಿಪಾಲ ಪರಿಸರದಲ್ಲಿ ಇನ್ನಷ್ಟು ಮರಗಳನ್ನು ಕತ್ತರಿಸಲಾಗಿದೆ.

ಜಂಟಿ ಸರ್ವೆ ಏನಾಯಿತು ?:140 ಮರಗಳನ್ನು ಕಡಿಯುವ ಬಗ್ಗೆ ತೀವ್ರ ವಿರೋಧ ವ್ಯಕ್ತಗೊಂಡ ಹಿನ್ನೆಲೆಯಲ್ಲಿ ಮರಗಳನ್ನು ಕಡಿಯುವ, ಸ್ಥಳಾಂತರ ಮಾಡುವ ಬಗ್ಗೆ ಸ್ಥಳೀಯ ಪರಿಸರಾಸಕ್ತರ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಸರ್ವೇ ನಡೆಸಲು ಅರಣ್ಯ ಇಲಾಖೆ ನಿರ್ಧರಿಸಿತ್ತು. ಕಾಮಗಾರಿ ಪ್ರದೇಶದಲ್ಲಿ 2ಗೋಳಿ, 2 ಅಶ್ವತ್ಥ, 1 ಅತ್ತಿ ಮರಗಳಿವೆ, ಅವುಗಳನ್ನು ಸ್ಥಳಾಂತರಿಸಲು ಪ್ರಯತ್ನಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರು. ಜಂಟಿ ಸರ್ವೇ ನಡೆದು ತಜ್ಞರ ಸಲಹೆ ಮೇರೆಗೆ 15 ರಿಂದ 20 ಮರಗಳ ಸ್ಥಳಾಂತರಕ್ಕೆ ಗುರುತಿಸಲಾಗಿತ್ತು. 2 ಮರಗಳನ್ನು ಸ್ಥಳಾಂತರಿಸಲಾಗಿದ್ದು, ಉಳಿದ ಮರಗಳ ಸ್ಥಳಾಂತರ ಪ್ರಕ್ರಿಯೆ ಬಾಕಿ ಇರುವಾಗಲೇ ನಾಲ್ಕೈದು ಮರಗಳನ್ನು ರಾತ್ರೊರಾತ್ರಿ ಕಡಿಯಲಾಗಿದೆ.

1809 ಮರಗಳಿಗೆ ಕೊಡಲಿ ?: ಉಡುಪಿ ಜಿಲ್ಲೆಯಲ್ಲಿ ಅಭಿವೃದ್ಧಿ, ರಸ್ತೆ ವಿಸ್ತರಣೆ ಹೆಸರಲ್ಲಿ 1809 ಮರಗಳಿಗೆ ಕೊಡಲಿ ಏಟು ಬೀಳಲಿದೆ. ಬ್ರಹ್ಮಾವರ ತಾಲೂಕು ಸೀತಾನದಿ-ಬ್ರಹ್ಮಾವರ ರಸ್ತೆ(ಬ್ರಹ್ಮಾವರದಿಂದ ಹೆಬ್ರಿ ಕಡೆಗೆ 7 ಕಿ.ಮೀ.) ವರೆಗೆ ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸುವ ಸಲುವಾಗಿ 1092 ಮರಗಳನ್ನು ಕಡಿಯಲು ಉದ್ದೇಶಿಸಲಾಗಿದೆ. ಪೆರ್ಡೂರು- ಹರಿಕಂಡಿಕೆ- ದೊಂಡೇರಂಗಡಿ ಜಿಲ್ಲಾ ಮುಖ್ಯ ರಸ್ತೆಯ ಸಾಂತ್ಯಾರು ಎಂಬಲ್ಲಿಂದ ಹರಿಕಂಡಿಕೆ ಜಂಕ್ಷನ್ ಮೂಲಕ ದೊಂಡೇರಂಗಡಿ- ಕೆ.ಜಿ ರೋಡ್‌ವರೆಗಿನ 3 ಕಿ.ಮೀ ಹಳೆಯ ರಸ್ತೆ ವಿಸ್ತರಣೆಗಾಗಿ 91 ಮರ, ಬ್ರಹ್ಮಾವರ ತಾಲೂಕು ಸೀತಾನದಿ-ಬ್ರಹ್ಮಾವರ ರಾಜ್ಯ ರಸ್ತೆಯ ನೀಲಾವರ ಕ್ರಾಸ್‌ನಿಂದ ಪೇತ್ರಿ ಬಸ್ ತಂಗುದಾಣದವರೆಗೆ 4 ಕಿ.ಮೀ ದೂರದವರೆಗೆ ರಸ್ತೆ ಅಭಿವೃದ್ಧಿ ಪಡಿಸಲು 626 ಮರಗಳನ್ನು ಕಡಿಯಲು ಉದ್ದೇಶಿಸಲಾಗಿದೆ.

ಅರಣ್ಯ ಸಹಾಯಕ ಸಂರಕ್ಷಣಾಲಯದೊಂದಿಗೆ ಚರ್ಚೆಯನ್ನು ಮುಂದುವರೆಸಿದ ನಂತರವೂ ಕೆಲವು ಮರಗಳನ್ನು ರಕ್ಷಿಸುವಲ್ಲಿ ನಾವು ವಿಫಲರಾಗಿದ್ದೇವೆ. ಮರಗಳನ್ನು ಕಡಿಯುವ ಬದಲು ಅವುಗಳನ್ನು ಮರು ನೆಡುವುದರಲ್ಲಿ ಸ್ಥಳೀಯ ಸಮುದಾಯ ಮತ್ತು ಪರಿಸರವಾದಿಗಳು ಧ್ವನಿ ಎತ್ತಬೇಕು. ನಮ್ಮ ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಿಸಲು ಪರ್ಯಾಯ ಮಾರ್ಗ ಕಂಡುಹಿಡಿಯುವಲ್ಲಿ ಜಿಲ್ಲಾಡಳಿತ ಹೆಚ್ಚು ಸಂವೇದನಾಶೀಲವಾಗಿರಬೇಕು.
– ಬಾಲಕೃಷ್ಣ ಮುದ್ದೋಡಿ. ಪರಿಸರ ವಿಜ್ಞಾನಿ. ಎಂಐಟಿ ಮಾಹೆ.

ಸಾರ್ವಜನಿಕ ಆಕ್ಷೇಪಣೆ ಸಾಂಕೇತಿಕವಾಗುತ್ತಿದೆ. ಮರಗಳನ್ನು ಉಳಿಸಿ ಎಂದು ನಾವು ಪ್ರತಿಭಟನೆ ಮಾಡಿದರೆ ಪ್ರಚಾರ ಸಿಗುತ್ತದೆ, ಜನ ಬೆಂಬಲ ಸಿಗುತ್ತಿಲ್ಲ. ವೃಕ್ಷ ಸಂರಕ್ಷಣೆ ಕಾಯ್ದೆ ಸರಿಯಾಗಿ ಅನುಷ್ಠಾನವಾಗುತ್ತಿಲ್ಲ. ಆಡಳಿತ ವ್ಯವಸ್ಥೆ, ಜನಪ್ರತಿನಿಧಿಗಳಿಂದ ಇದಕ್ಕೆ ಸಹಕಾರವಿಲ್ಲ. ರಸ್ತೆ ವಿಸ್ತರಣೆಗಾಗಿ 1809 ಮರಗಳು ಬಲಿಯಾಗುವ ವಿಚಾರ ಕೇಳಿ ಆತಂಕವಾಗುತ್ತಿದೆ. ಅಭಿವೃದ್ಧಿ ಹೆಸರಲ್ಲಿ ನಮ್ಮನ್ನೆ ನಾವು ನಿರ್ನಾಮ ಮಾಡಿಕೊಳ್ಳುವ ಮೂಲಕ ಮುಂದಿನ ಪೀಳಿಗೆಗೆ ಅನ್ಯಾಯ ಮಾಡುತ್ತಿದ್ದೇವೆ.
– ಪ್ರೇಮಾನಂದ ಕಲ್ಮಾಡಿ, ಪರಿಸರವಾದಿ.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...