ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಳಪೆ

blank

ಸಾಗರ: ರಾಷ್ಟ್ರೀಯ ಹೆದ್ದಾರಿ-206 ಕಾಮಗಾರಿ ಅವೈಜ್ಞಾನಿಕ ಹಾಗೂ ಕಳಪೆಯಿಂದ ಕೂಡಿದೆ. ಈ ಬಗ್ಗೆ ಸಾರ್ವಜನಿಕರು ದೂರಿದರೂ ಚುನಾಯಿತ ಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಮಲೆನಾಡು ಭೂರಹಿತ ರೈತ ಹೋರಾಟ ವೇದಿಕೆ ಜಿಲ್ಲಾ ಸಂಚಾಲಕ ತೀ.ನ.ಶ್ರೀನಿವಾಸ್ ಅಸಮಾಧಾನ ವ್ಯಕ್ತಪಡಿಸಿದರು.
ಸಂಸದರು, ಶಾಸಕರು, ನಗರಸಭೆ ಆಡಳಿತ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ, ತನಿಖೆಗೆ ಮಾಡಿಸದಿದ್ದರೆ ಪ್ರತಿಭಟನೆ ನಡೆಸುತ್ತೇವೆ. ರಾಷ್ಟ್ರೀಯ ಹೆದ್ದಾರಿ ಸೇರಿ ವಿವಿಧ ಕಳಪೆ ಕಾಮಗಾರಿಗಳ ಕುರಿತು ಲೋಕಾಯುಕ್ತಕ್ಕೂ ದೂರು ನೀಡಲಾಗುತ್ತದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಾಗರ ನಗರದ ತ್ಯಾಗರ್ತಿ ಕ್ರಾಸ್‌ನಿಂದ ಎಲ್.ಬಿ.ಕಾಲೇಜುವರೆಗೆ 65 ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥ ನಿರ್ಮಾಣವಾಗುತ್ತಿದೆ. ಈಗಾಗಲೇ 15 ಕೋಟಿ ರೂ.ಗಳನ್ನು ಭೂಸ್ವಾಧೀನ ಪರಿಹಾರ ನೀಡಿದ್ದು, 50 ಕೋಟಿ ರೂ. ವೆಚ್ಚದಲ್ಲಿ ಡಾಂಬರೀಕರಣ ನಡೆಯುತ್ತಿದೆ. 2024ರ ಜುಲೈ ಅಂತ್ಯದೊಳಗೆ ಕಾಮಗಾರಿ ಮುಗಿಯಬೇಕಿತ್ತು. ಈ ವಷ ಜುಲೈನೊಳಗೆ ಮುಗಿಯುವ ಸಾಧ್ಯತೆ ಕಡಿಮೆ. ರಸ್ತೆ ನಿರ್ಮಿಸುವಾಗ ಒಂದೊಂದು ಕಡೆ ಒಂದೊಂದು ರೀತಿ ಭೂಸ್ವಾಧೀನ ಮಾಡಲಾಗಿದೆ. ಬಿ.ಎಚ್.ರಸ್ತೆಯಿಂದ ಪೊಲೀಸ್ ಸ್ಟೇಷನ್ ವೃತ್ತದವರೆಗೆ ಎರಡೂ ಕಡೆಗಳಲ್ಲಿ ರಸ್ತೆಗೆ ಭೂಸ್ವಾಧೀನ ಮಾಡಿಕೊಳ್ಳಬೇಕು ಎಂಬ ನಿಯಮ ಉಲ್ಲಂಘಿಸಲಾಗಿದೆ. ಹಾಗಾಗಿ ತಕ್ಷಣ ಕಾಮಗಾರಿ ಪರಿಶೀಲನೆ ನಡೆಸಿ ಲೋಪವನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು.
ನಗರಸಭೆ ವ್ಯಾಪ್ತಿಯಲ್ಲೂ ಕಾಮಗಾರಿಗಳು ಆಮೆಗತಿಯಲ್ಲಿ ಸಾಗುತ್ತಿವೆ. ಸೊರಬ ರಸ್ತೆ ಅಗಲೀಕರಣ ನನೆಗುದಿಗೆ ಬಿದ್ದಿದೆ. ಮೀನು ಮಾರುಕಟ್ಟೆ ಕಾಮಗಾರಿ ಅರೆಬರೆಯಾಗಿದೆ. ಕೆಲವರು ಮಳಿಗೆಯನ್ನು ಸಿಮೆಂಟ್ ಗೋದಾಮು ಮಾಡಿಕೊಂಡಿದ್ದಾರೆ. ಈಜುಕೊಳ ಕಾಮಗಾರಿ ಕಳಪೆಯಾಗಿದ್ದು ಈತನಕ ರಿಪೇರಿ ಮಾಡಿಲ್ಲ. ಒಳಚರಂಡಿ ಕಾಮಗಾರಿ ಈತನಕ ಮುಗಿಸಿಲ್ಲ. ಸಣ್ಣಮನೆ ಸೇತುವೆ ಕಾಮಗಾರಿ ಆರಂಭವಾಗಿ ವರ್ಷಗಳೇ ಕಳೆದಿವೆ ಎಂದು ದೂರಿದರು.
ಫ್ರಾಂಕಿ ಲೋಬೋ, ಫ್ರಾಂಕಿ ಫರ್ನಾಂಡಿಸ್, ಹ್ಯಾರಿ ಫರ್ನಾಂಡಿಸ್, ಮಂಜುನಾಥ್, ವಿಕ್ರಮ್ ಹಾಜರಿದ್ದರು.

Share This Article

ರಾತ್ರಿ ವೇಳೆ ಮಾವಿನ ಹಣ್ಣು ತಿನ್ನಬಾರದು! ಯಾಕೆ ಗೊತ್ತಾ? mango

mango: ಬೇಸಿಗೆಯಲ್ಲಿ ಹೆಚ್ಚು ಇಷ್ಟವಾಗುವ ಹಣ್ಣು ಮಾವಿಹಣ್ಣು. ಇದು ವಿಟಮಿನ್ ಎ, ಸಿ, ಫೈಬರ್, ಉತ್ಕರ್ಷಣ…

ಅಕ್ಷಯ ತೃತೀಯ ಹಬ್ಬಕ್ಕೂ ಮುನ್ನ ನಿಮ್ಮ ಮನೆಯಿಂದ ಈ ವಸ್ತುಗಳನ್ನು ತೆಗೆದುಹಾಕಿ..  Akshaya Tritiya

Akshaya Tritiya: ಅಕ್ಷಯ ತೃತೀಯ ಹಬ್ಬವನ್ನು ಲಕ್ಷ್ಮಿ ದೇವಿಯ ಹಬ್ಬವೆಂದು ಪರಿಗಣಿಸಲಾಗುತ್ತದೆ.  ಚಿನ್ನದ ಅಂಗಡಿಗಳು ವ್ಯಾಪಾರದಿಂದ…

ಕಬ್ಬಿನ ರಸವನ್ನು ಎಷ್ಟು ದಿನ ಸಂಗ್ರಹಿಸಬಹುದು..ಈ ಜ್ಯೂಸ್​​ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳಿವು..Sugarcane Juice

  Sugarcane Juice: ಕಬ್ಬಿನ ಜ್ಯೂಸ್​​ ಬೇಸಿಗೆಯಲ್ಲಿ ಎಲ್ಲರೂ ಹೆಚ್ಚು ಇಷ್ಟಪಡುವ ಆರೋಗ್ಯಕರ ಪಾನೀಯಗಳಲ್ಲಿ ಒಂದಾಗಿದೆ.…