14ರಿಂದ ರಾಷ್ಟ್ರ ಮಟ್ಟದ ಖೋ-ಖೋ ಪಂದ್ಯಾಟ

ತೀರ್ಥಹಳ್ಳಿ: ಏಕಲವ್ಯ ಸ್ಪೋರ್ಟ್ಸ್ ಕ್ಲಬ್‌ನಿಂದ ಮಾ.14ರಿಂದ ಪಟ್ಟಣದ ಬಾಳೇಬೈಲು ಕ್ರೀಡಾಂಗಣದಲ್ಲಿ ನಾಲ್ಕು ದಿನಗಳ ರಾಷ್ಟ್ರಮಟ್ಟದ ಆಹ್ವಾನಿತ ಹೊನಲು ಬೆಳಕಿನ ಪುರುಷರ ಮತ್ತು ಮಹಿಳೆಯರ ಖೋ-ಖೋ ಪಂದ್ಯಾವಳಿ ಆರಂಭವಾಗಲಿದೆ.
ಪಂದ್ಯಾವಳಿಯನ್ನು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಉದ್ಘಾಟಿಸುವರು. ಇದಕ್ಕೂ ಮುನ್ನ ಮಾರಿಕಾಂಬಾ ದೇವಸ್ಥಾನದಿಂದ ಕ್ರೀಡಾ ಜ್ಯೋತಿ ಹಾಗೂ ಪಟ್ಟಣದ ಕುಶಾವತಿ ನೆಹರು ಪಾರ್ಕಿನಿಂದ ಕ್ರೀಡಾಂಗಣದವರೆಗೆ ವಿವಿಧ ವೇಷಭೂಷಣಗಳೊಂದಿಗೆ ಕ್ರೀಡಾಪಟುಗಳನ್ನು ಮೆರವಣಿಗೆಯಲ್ಲಿ ಕರೆತರಲಾಗುವುದು. ಪಂದ್ಯಗಳ ವೀಕ್ಷಣೆಗೆ ಸುಮಾರು ಮೂರು ಸಾವಿರ ಮಂದಿ ಕೂರಬಹುದಾದ ಗ್ಯಾಲರಿಯನ್ನೂ ವ್ಯವಸ್ಥೆ ಮಾಡಲಾಗಿದೆ ಎಂದು ವ್ಯವಸ್ಥಾಪಕ ಸಮಿತಿಯ ಸುಧೀಂದ್ರ ಶೆಟ್ಟಿ ತಿಳಿಸಿದರು.
ಈ ಪಂದ್ಯಾವಳಿಯಲ್ಲಿ ಪುರುಷರ ವಿಭಾಗದಲ್ಲಿ ಮುಂಬೈ, ಪಶ್ಚಿಮ ರೈಲ್ವೆ, ಮಹಾರಾಷ್ಟ್ರ, ಕೊಲ್ಹಾಪುರ, ಎಎಂಎಸ್ ಪುಣೆ, ಕೇರಳ, ಖೇಲೋ ಇಂಡಿಯಾ, ಆಂಧ್ರಪ್ರದೇಶ ಹಾಗೂ ಕರ್ನಾಟಕ ತಂಡಗಳು. ಮಹಿಳಾ ವಿಭಾಗದಲ್ಲಿ ದೆಹಲಿ, ಕೇರಳ, ಮಹಾರಾಷ್ಟ್ರ, ಕೊಲ್ಲಾಪುರ, ಆರ್‌ಎಫ್ ಮುಂಬೈ, ಉಸ್ಮಾನಾಬಾದ್ ಮತ್ತು ಕರ್ನಾಟಕ ತಂಡಗಳು ಭಾಗವಹಿಸಲಿದ್ದು, ಎಲ್ಲ ಆಟಗಾರರೂ ಬಂದಿಳಿದಿದ್ದಾರೆ ಎಂದು ತಿಳಿಸಿದರು.
ಪ್ರತಿದಿನ ಸಂಜೆ 4 ಗಂಟೆಗೆ ಪಂದ್ಯಗಳು ಪ್ರಾರಂಭವಾಗಲಿವೆ. ಕ್ರೀಡಾಂಗಣಕ್ಕೆ ಹೊಂದಿಕೊಂಡಂತೆ ಮಹಿಳೆಯರು ಮಕ್ಕಳ ಮನರಂಜನೆಗಾಗಿ ಜಾಯಿಂಟ್ ವ್ಹೀಲ್ ಕೊಲಂಬಸ್ ಮುಂತಾದ ಮನರಂಜನೆಗಳಲ್ಲದೆ, ಆಹಾರ ಮಳಿಗೆಗಳನ್ನು ತೆರೆಯಲಾಗುವುದು. ವಾಹನ ಪಾರ್ಕಿಂಗ್‌ಗೆ ವಿಶಾಲ ಸ್ಥಳಾವಕಾಶ ಕಲ್ಪಿಸಲಾಗಿದೆ. ಇದೇ ಸಂದರ್ಭ ವಿವಿಧ ಕ್ಷೇತ್ರಗಳ ಗಣ್ಯರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.

Share This Article

Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..

ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…

Health Tips : ಮೆಟ್ಟಿಲು ಹತ್ತುವಾಗ ಸುಸ್ತಾಗುತ್ತದಾ..! ಈ ಸಲಹೆಗಳನ್ನು ಅನುಸರಿಸಿ

ಬೆಂಗಳೂರು: ಮೆಟ್ಟಿಲು ಹತ್ತುವಾಗ ಉಸಿರಾಟದ ತೊಂದರೆ ಸಾಮಾನ್ಯ. ಈ ಸಮಸ್ಯೆಯು ವಯಸ್ಸಾದಂತೆ ಹೆಚ್ಚಾಗುತ್ತಿದೆ, ಆದರೆ ಇತ್ತೀಚಿನ…