ಶ್ರೀಮಾ ಕೆ.ಎಚ್. ಯೋಗಾಸನದಲ್ಲಿ ರಾಷ್ಟ್ರಮಟ್ಟಕ್ಕೆ

yoga
Published on

ಕಡಬ: ಚಿತ್ರದುರ್ಗ ಜಿಲ್ಲೆ ಸಿರಿಗೆರೆಯಲ್ಲಿ ನಡೆದ 14 ಮತ್ತು 17ರ ವಯೋಮಾನದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಬೆಂಗಳೂರು ವಿಭಾಗ ಮತ್ತು ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ, ಕಡಬ ತಾಲೂಕು ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ 8ನೇ ತರಗತಿ ವಿದ್ಯಾರ್ಥಿನಿ ಶ್ರೀಮಾ ಕೆ.ಎಚ್. ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಹುದೇರಿ ಕುಶಾಲಪ್ಪ ಗೌಡ ಮತ್ತು ಸುಜಿತ ದಂಪತಿಯ ಪುತ್ರಿ. ಸಂಸ್ಥೆಯ ಯೋಗ ಶಿಕ್ಷಕಿ ಶಶಿಕಲಾ ತರಬೇತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net