More

  ರಾಷ್ಟ್ರಮಟ್ಟದ ವಾಲಿಬಾಲ್​ ಆಟಗಾರ್ತಿ ಹೃದಯಾಘಾತದಿಂದ ನಿಧನ

  ಬೆಳ್ತಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ, ಎಸ್​ಡಿಎಂ ಕಾಲೇಜಿನ ಹಳೇ ವಿದ್ಯಾರ್ಥಿನಿ ಸಾಲಿಯತ್​(24) ಬುಧವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

  ಪಡಂಗಡಿ ಪೊಯ್ಯೇಗುಡ್ಡೆ ನಿವಾಸಿಐಆದ ಸಾಲಿಯತ್​ ಅವರಿಗೆ ವರ್ಷದ ಹಿಂದೆ ವಿವಾಹವಾಗಿತ್ತು. ಪ್ರಸ್ತುತ ಅವರು ಪತಿಯ ಮನೆಯಲ್ಲಿ ನೆಲೆಸಿದ್ದರು.

  ಕ್ರೀಡಾ ಕ್ಷೇತ್ರದಲ್ಲಿ ಸಾಧನೆ

  ಹೃದಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಕಾರಣ ಮಂಗಳೂರಿನ ಆಸ್ಪತ್ರೆ ಒಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

  Saliyat (1)

  ಇದನ್ನೂ ಓದಿ: ಪಾರ್ಟಿ ಮಾಡುವ ವೇಳೆ ನಿಂದನೆ; ಸ್ನೇಹಿತೆಯನ್ನು ಇರಿದು ಕೊಂದ ಗೆಳತಿ

  ಪಡಂಗಡಿಯಲ್ಲಿ ಪ್ರಾಥಮಿಕ, ಎಸ್.ಡಿ.ಎಂ. ಅನುದಾನಿತ ಪ್ರೌಢ ಶಾಲೆ ಉಜಿರೆಯಲ್ಲಿ 9 ತರಗತಿ, ಮುಂಡಾಜೆಯಲ್ಲಿ 10 ನೇ ತರಗತಿ ಶಿಕ್ಷಣ ಪೂರ್ಣಗೊಳಿಸಿ, ಉಜಿರೆ ಎಸ್.ಡಿ.ಎಂ.ನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಪಡೆಯುತ್ತಿರುವಾಗ ಕ್ರೀಡಾ ಕ್ಷೇತ್ರದಲ್ಲಿ ಅತ್ಯಧಿಕ ಸಾಧನೆ ತೋರಿದ್ದರು.

  ರಾಷ್ಟ್ರಮಟ್ಟದ ವಾಲಿಬಾಲ್​ ಸ್ಪರ್ಧೆಯಲ್ಲಿ ಬೆಳ್ಳಿ ಪದಕ, ಸೀನಿಯರ್ ನ್ಯಾಷನಲ್ ದಕ್ಷಿಣ ವಲಯದಲ್ಲಿ ಚಿನ್ನದ ಪದಕ, ಜ್ಯೂನಿಯರ್ ನ್ಯಾಷನಲ್ ನಲ್ಲಿ ತೃತೀಯ ಸ್ಥಾನ ಗಳಿಸಿರುವುದು ಇವರ ಸಾಧನೆಯ ಹಾದಿಯಾಗಿದೆ.

  ರಾಜ್ಯೋತ್ಸವ ರಸಪ್ರಶ್ನೆ - 24

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts