More

    25ರಂದು ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆ

    ಶಿವಮೊಗ್ಗ: ವರ್ಷಿಣಿ ಯೋಗ ಶಿಕ್ಷಣ, ಸಾಂಸ್ಕೃತಿಕ ಮತ್ತು ಕ್ರೀಡಾ ಟ್ರಸ್ಟ್ ಹಾಗೂ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯಿಂದ ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ಫೆ.25ರ ಬೆಳಗ್ಗೆ ಕೋಟೆ ರಸ್ತೆಯ ವಾಸವಿ ವಿದ್ಯಾಶಾಲೆ ಆವರಣದಲ್ಲಿ 6ನೇ ವರ್ಷದ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ವೆಂಕಟೇಶ್ ತಿಳಿಸಿದ್ದಾರೆ.

    ಬಾಲಕ, ಬಾಲಕಿಯರು, ಪುರುಷ ಹಾಗೂ ಮಹಿಳೆಯರಿಗಾಗಿ ವಿವಿಧ 8 ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಇದರಲ್ಲಿ 400 ಸ್ಪರ್ಧಾಳುಗಳು ಭಾಗವಹಿಸುವ ನಿರೀಕ್ಷೆ ಇದೆ. ಈಗಾಗಲೇ ನೋಂದಣಿ ಆರಂಭವಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    2022-23ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಇದೇ ವೇಳೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಶಾಸಕ ಎಸ್.ಎನ್.ಚನ್ನಬಸಪ್ಪ ಸ್ಪರ್ಧೆ ಉದ್ಘಾಟಿಸುವರು. ಟ್ರಸ್ಟ್ ಅಧ್ಯಕ್ಷ ಪಿ.ಪೆಂಚಾಲಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್, ಎಂಎಲ್‌ಸಿ ಡಿ.ಎಸ್.ಅರುಣ್, ಡಿಸಿ ಗುರುದತ್ತ ಹೆಗಡೆ, ಎಸ್ಪಿ ಮಿಥುನ್‌ಕುಮಾರ್, ಪಾಲಿಕೆ ಆಯುಕ್ತ ಕೆ.ಮಾಯಣ್ಣ ಗೌಡ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
    ಸಂಜೆ 5ಕ್ಕೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಎಎಸ್ಪಿ ಅನಿಲ್‌ಕುಮಾರ್ ಭೂಮರೆಡ್ಡಿ, ಡಿವೈಎಸ್‌ಪಿ ಬಾಬು ಅಂಜನಪ್ಪ, ಡಾ.ಪಂಕಜಕುಮಾರ್, ಡಾ. ಐಶ್ವರ್ಯ ಅರವಿಂದ್, ದೀಪಿಕಾ ಶ್ರೀಕಾಂತ್ ಅವರಿಗೆ ಅತ್ಯುತ್ತಮ ಸಮಾಜ ಸೇವಾ ರತ್ನ ಪುರಸ್ಕಾರ ನೀಡಲಾಗುವುದು.
    ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸತ್ಯ, ಪಾಂಡುರಂಗ, ಕೋಡಿಗಲ್ ರಮೇಶ್, ಷಣ್ಮುಖಪ್ಪ, ಶಿವಾಜಿ, ರಂಗಪ್ಪ, ಭರಮಪ್ಪ, ಅಣ್ಣಪ್ಪ, ರಾಜಕುಮಾರ್, ಚಿನ್ನಯ್ಯ, ಸುನೀತಾ ರಾಜ್, ಜಾಹ್ನವಿ ಹೇಮಂತ್ ಅವರನ್ನು ಸನ್ಮಾನಿಸಲಾಗುವುದು ಎಂದರು.
    ಟ್ರಸ್ಟ್ ನಿರ್ದೇಶಕರಾದ ಗಂಗಾಧರ್, ಭಾನುಪ್ರಸಾದ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts