More

    ಬಿಎಲ್‌ಡಿಇಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಆಚರಣೆ

    ವಿಜಯಪುರ: ಸಂಚಾರಿ ನಿಯಮಗಳನ್ನು ತಪ್ಪದೇ ಪಾಲಿಸುವ ಮೂಲಕ ಜಾಗರೂಕತೆಯಿಂದ ವಾಹನ ಚಲಾಯಿಸಿದಾಗ ಮಾತ್ರ ರಸ್ತೆ ಅಪಘಾತ ಮತ್ತು ಅದರಿಂದಾಗುವ ಜೀವಹಾನಿ ತಡೆಯಲು ಸಾಧ್ಯ ಎಂದು ಡಿವೈಎಸ್ಪಿ ಬಸವರಾಜ ಯಲಿಗಾರ ಹೇಳಿದರು.

    ನಗರದ ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯದ ಟ್ರಾಮಾ ಸೆಂಟರ್‌ನಲ್ಲಿ ವಿವಿಯ ಆಂತರಿಕ ಗುಣಮಟ್ಟ ಭರವಸೆ ಕೋಶದಿಂದ ಬುಧವಾರ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

    ಸಂಚಾರಿ ನಿಯಮಗಳನ್ನು ಬಹಳಷ್ಟು ಚಾಲಕರು ಉಲ್ಲಂಘಿಸುತ್ತಿರುವುದು ಕಂಡು ಬಂದಿದೆ. ಅತೀ ವೇಗದ ಚಾಲನೆ ಮತ್ತು ಮಧ್ಯಪಾನ ಸೇವಿಸಿ ವಾಹನ ಚಲಾಯಿಸುವುದರಿಂದ ಅಪಘಾತಗಳು ಹೆಚ್ಚುತ್ತಿವೆ. ಅಜಾಗೂರಕತೆ ಚಾಲನೆಯಿಂದ ತಾವಷ್ಟೇ ತೊಂದರೆ ಅನುಭವಿಸದೇ ವಾಹನಗಳಲ್ಲಿರುವ ಇತರ ಪ್ರಯಾಣಿಕರಿಗೂ ಹಾನಿಯಾಗಿ ಮತ್ತು ತಮ್ಮನ್ನೇ ನಂಬಿರುವ ಕುಟುಂಬ ಸದಸ್ಯರ ಭವಿಷ್ಯಕ್ಕೂ ತೊಂದರೆ ಪಡುವಂತಾಗುತ್ತದೆ ಎಂದರು.

    ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಸಿಬೇಕು. ತಾವು ಸಂಚರಿಸುವ ಮಾರ್ಗಗಳಲ್ಲಿ ಸದಾ ಜಾಗರೂಕತೆಯಿಂದ ವಾಹನ ಓಡಿಸಿದರೆ ಸುರಕ್ಷಿತ ಪ್ರಯಾಣ ಸಾಧ್ಯ ಎಂದು ಅವರು ಹೇಳಿದರು.

    ರಸ್ತೆ ಸುರಕ್ಷತೆ ಮತ್ತು ಸಂಚಾರಿ ನಿಯಮಗಳ ಪಾಲನೆ ಕುರಿತು ಡಾ. ಸಿದ್ದಲಿಂಗ ತಾಳಿಕೋಟಿ ಪ್ರತಿಜ್ಞಾವಿಧಿ ಬೋಧಿಸಿದರು. ಬಿ.ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಉಪಪ್ರಾಚಾರ್ಯ ಡಾ. ಎಂ.ಬಿ. ಪಾಟೀಲ, ಡಾ. ಸುಮಂಗಲಾ ಪಾಟೀಲ ಮತ್ತಿತರಿದ್ದರು.
    ಡಾ. ಲತಾ ಮುಳ್ಳೂರು ಸ್ವಾಗತಿಸಿ ಪರಿಚಯಿಸಿದರು. ಡಾ. ನಿಲಿಮಾ ಡೋಂಗ್ರೆ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts