ವಿದ್ಯಾರ್ಥಿಗಳಲ್ಲಿರಲಿ ವೈಜ್ಞಾನಿಕ ಮನೋಭಾವ...

Science Lead
Published on

ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಆಶಯ

ರಾಷ್ಟ್ರೀಯ ವಿಜ್ಞಾನ ದಿನ ಉದ್ಘಾಟನೆ

ವಿಜಯವಾಣಿ ಸುದ್ದಿಜಾಲ ಉಡುಪಿ

ಮೂಢನಂಬಿಕೆ ಮತ್ತು ಮೌಢ್ಯ ಆಚರಣೆಗಳಿಂದ ಹೊರಬರಲು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಹಕಾರಿಯಾಗಿದೆ. ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ವಿಜ್ಞಾನಿಗಳಾಗಿ ಸಾಧನೆ ಮಾಡುವ ಮೂಲಕ ನೊಬೆಲ್​ ಪಾರಿತೋಷಕ ಗಳಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಸಲಹೆ ನೀಡಿದರು.

ಉಡುಪಿಯ ಒಳಕಾಡಿನಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಉಡುಪಿ ಜಿಪಂ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

Science 2
ಜಿಪಂ ಸಿಇಒ ಪ್ರತೀಕ್​ ಬಾಯಲ್​ ಪ್ರಾಸ್ತಾವಿಕವಾಗಿ ಮಾತನಾಡಿ, ಕಲಿಕೆಯ ಕುರಿತು ಮಕ್ಕಳು ಕುತೂಹಲ ಬೆಳೆಸಿಕೊಳ್ಳಬೇಕು. ಕಲಿಕೆಯು ನೀರಸವಾಗದಂತೆ ವಿಶೇಷ ಪ್ರಯತ್ನ ಮಾಡಬೇಕು ಎಂದರು.

ಉಡುಪಿ ನಗರಸಭಾ ಪ್ರಭಾರ ಪೌರಾಯುಕ್ತ ಡಾ. ಉದಯಕುಮಾರ್​ ಶೆಟ್ಟಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ., ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಯಲ್ಲಮ್ಮ, ಪ್ರೌಢಶಾಲೆಯ ಮುಖ್ಯೋಧ್ಯಾಪಕಿ ಪೂರ್ಣಿಮಾ ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಡಯಟ್​ನ ಉಪಪ್ರಾಂಶುಪಾಲ ಡಾ. ಅಶೋಕ್​ ಕಾಮತ್​ ಕಾರ್ಯಕ್ರಮ ನಿರೂಪಿಸಿದರು. ಜಿಪಂನ ತಾಂತ್ರಿಕ ಅಧಿಕಾರಿ

(ಎನ್​ಆರ್​ಡಿಎಂಎಸ್​) ವಿಕ್ರಂ ಆರ್​. ವಂದಿಸಿದರು.

ಕೃತಕ ಬುದ್ಧಿಮತ್ತೆ ಕಾರ್ಯಾಗಾರ

ಕೃತಕ ಬುದ್ಧಿಮತ್ತೆ (ಎಐ)ಯು ಬದುಕಿನ ಪರಿವರ್ತನೆಗೆ ಸಹಕಾರಿ ಎಂಬ ವಿಚಾರವಾಗಿ ಕಾರ್ಯಾಗಾರ ನಡೆಯಿತು. ಮಣಿಪಾಲ ವಿಶ್ವವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಅಶ್ವತ್ಥ್​ ರಾವ್​ ದಿಕ್ಸೂಚಿ ಭಾಷಣ ಮಾಡಿದರು. ವೈದ್ಯಕೀಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ಕುರಿತಂತೆ ಡಾ. ಮುರಳೀಕೃಷ್ಣ, ವಾಣಿಜ್ಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ಕುರಿತು ಡಾ. ಸವಿತಾ ಜಿ., ಶಿಕ್ಷಣದಲ್ಲಿ ಕೃತಕ ಬುದ್ಧಿಮತ್ತೆ ಕುರಿತು ಡಾ. ನೇಹಾ ಎಸ್​. ಗಾಂಧಿ ಮಾತನಾಡಿದರು. ವಿದ್ಯಾರ್ಥಿಗಳು ಹಲವಾರು ಪ್ರಶ್ನೆ ಕೇಳಿ ತಜ್ಞರಿಂದ ಉತ್ತರ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net