ರಾಷ್ಟ್ರೀಯ ಸೇವಾ ಯೋಜನೆ ಶಿಬಿರ

NSS
ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ ಬೀಜಾಡಿಯ ಸೀತಾಲಕ್ಷ್ಮೀ ಮತ್ತು ರಾಮಕೃಷ್ಣ ಹತ್ವಾರ್ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು
Published on

ಕುಂದಾಪುರ: ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ ಬೀಜಾಡಿಯ ಸೀತಾಲಕ್ಷ್ಮೀ ಮತ್ತು ರಾಮಕೃಷ್ಣ ಹತ್ವಾರ್ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರದಿಂದ ಪ್ರಾರಂಭಗೊಂಡಿತು.

ರಾಷ್ಟೀಯ ಮಾನವ ಹಕ್ಕುಗಳ ಸಮಿತಿ ಪ್ರಧಾನ ಕಾರ್ಯದರ್ಶಿ ದಿನೇಶ್ ಗಾಣಿಗ ಶಿಬಿರಕ್ಕೆ ಚಾಲನೆ ನೀಡಿದರು. ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ. ಅಧ್ಯಕ್ಷತೆ ವಹಿಸಿದ್ದರು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಲಕ್ಷ್ಮಣ ಟಿ.ನಾಯಕ್, ಶಾಲಾ ಹಿತರಕ್ಷಣಾ ಸಮಿತಿ ಗೌರವಾಧ್ಯಕ್ಷ ಶೇಷಗಿರಿ ಗೋಟ, ಉದ್ಯಮಿ ದಿನಕರ ಶೆಟ್ಟಿ, ನಿವೃತ್ತ ಮೆಸ್ಕಾಂ ಅಧಿಕಾರಿ ಬಾಬಣ್ಣ ಪೂಜಾರಿ, ಕಾರ್ತಿಕ್ ಕುಂದರ್, ಮುಖ್ಯ ಶಿಕ್ಷಕಿ ವಿನೋದಾ ಎಂ., ಹಿರಿಯ ಉಪನ್ಯಾಸಕ ಚಂದ್ರಶೇಖರ ಶಿಬಿರಾರ್ಥಿಗಳಿಗೆ ಶುಭಹಾರೈಸಿದರು. ಘಟಕದ ಶಿಬಿರಾಧಿಕಾರಿ ವನಿತಾ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಉದಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net