More

    ಕಾಂಗ್ರೆಸ್​ಗೆ ಮತ್ತೊಂದು ಮುಜುಗರ- ಮಗಳ ನಂತರ ಅಮ್ಮನ ಸರದಿ: ಸೋನಿಯಾ ವಿರುದ್ಧ ಎಫ್​ಐಆರ್​ ದಾಖಲು

    ಬೆಂಗಳೂರು: ವಲಸೆ ಕಾರ್ಮಿಕರಿಗೆ ಬಸ್​ ವ್ಯವಸ್ಥೆ ಮಾಡುವ ಸಂಬಂಧ ಸುಳ್ಳು ಹೇಳಿ ಸಿಕ್ಕಿಬಿದ್ದಿರುವ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ಪಕ್ಷದಿಂದಲೇ ಟೀಕೆಗೆ ಒಳಗಾಗಿ ಮುಜುಗರಕ್ಕೆ ಒಳಗಾಗಿರುವ ಬೆನ್ನಲ್ಲೇ ಇದೀಗ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಸರದಿ!

    ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಜನರ ರಕ್ಷಣೆ ಮಾಡುವ ಸಲುವಾಗಿ ಆರಂಭಗೊಂಡಿರುವ ಪಿಎಂ ಕೇರ್ಸ್​ ನಿಧಿಯ ಬಗ್ಗೆ ಗಂಭೀರ ಆರೋಪ ಮಾಡಿರುವ ಕಾಂಗ್ರೆಸ್​ ಅಧ್ಯಕ್ಷ ಸೋನಿಯಾ ಗಾಂಧಿ ವಿರುದ್ಧ ಎಫ್​ಐಆರ್​ ದಾಖಲಾಗಿದ್ದು, ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

    ಇದನ್ನೂ ಓದಿ: ‘ಪ್ರಿಯಾಂಕಾ ಗಾಂಧಿ​ ಈ ಸಮಯದಲ್ಲಿ ಕೀಳು ರಾಜಕೀಯ ಮಾಡಬಾರದಿತ್ತು…’-ಇದನ್ನು ಹೇಳಿದ್ದು ಕಾಂಗ್ರೆಸ್ ಶಾಸಕಿ

    ಜನರೇ ಖುದ್ದಾಗಿ ಇಷ್ಟಪಟ್ಟು ನೀಡುವ ಹಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಗಳ ಟೂರ್​ ಮಾಡಿ ಮಜಾ ಮಾಡುತ್ತಿದ್ದಾರೆ. ಇದು ಬಡಜನರಿಗೆ ಖರ್ಚು ಆಗುತ್ತಿಲ್ಲ, ಈ ಹಣದ ಸದ್ಬಳಕೆ ಆಗುತ್ತಿಲ್ಲ ಎಂದು ಕಾಂಗ್ರೆಸ್​ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಬರೆಯಲಾಗಿದೆ.

    ಇದೀಗ ಭಾರಿ ವೈರಲ್​ ಆಗಿದ್ದು, ನೆಟ್ಟಿಗರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ವಕೀಲರೊಬ್ಬರು ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್​ಐಆರ್​) ದಾಖಲಿಸಿಕೊಳ್ಳಲಾಗಿದೆ.

    ಇದನ್ನೂ ಓದಿ: ಕ್ವಾರಂಟೈನ್​ ಗೋಲ್​ಮಾಲ್​? ಒಳ್ಳೆ ಸೌಲಭ್ಯ ಮಾತ್ರ ಕೇಳ್ಲೇಬೇಡಿ, ದುಡ್ಡು ಕೊಟ್ರೆ ಹೊರಗಡೆ ಆರಾಮಾಗಿ ಹೋಗಿ…

    ಇಂತಹ ಹೇಳಿಕೆಗಳ ಮೂಲಕ ಮೋದಿಯವರ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದ್ದು, ಜನರನ್ನು ಪ್ರಚೋದಿಸಲಾಗುತ್ತಿದೆ ಎಂದು ವಕೀಲ ಪ್ರವೀಣ್​ ದೂರಿನಲ್ಲಿ ಆರೋಪಿಸಿದ್ದಾರೆ. ಈ ರೀತಿಯ ಸಂದೇಶ ಜನರನ್ನು ತಪ್ಪು ದಾರಿಗೆ ಎಳೆಯುತ್ತದೆ. ಯಾವುದೇ ಸಾಕ್ಷ್ಯಾಧಾರಗಳು ಇಲ್ಲದೆಯೇ ಸುಖಾ ಸುಮ್ಮನೆ ಜನರನ್ನು ಕೇಂದ್ರ ಸರ್ಕಾರದ ವಿರುದ್ಧ ಎತ್ತಿ ಕಟ್ಟುವ ಹುನ್ನಾರ ಇದು. ಆದ್ದರಿಂದ ಕಾಂಗ್ರೆಸ್‌ ಪಕ್ಷದ ಅಧಿಕೃತ ಟ್ವಿಟರ್​ ಖಾತೆ ಐಎನ್‌ಸಿ ಇಂಡಿಯಾ, ಕಾಂಗ್ರೆಸ್​ ಅಧ್ಯಕ್ಷರು ಮತ್ತು ನೌಕರರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಪ್ರವೀಣ್‌ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಮೇ 11ರಂದು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಟ್ವಿಟರ್​ನಲ್ಲಿ ಪ್ರಕಟಿಸಲಾಗಿತ್ತು. ಈ ಬಗ್ಗೆ ವಕೀಲ ಪ್ರವೀಣ್​ ಅವರು ಸಾಕಷ್ಟು ಅಧ್ಯಯನ ನಡೆಸಿದ ನಂತರ ದೂರು ದಾಖಲು ಮಾಡಿದ್ದಾರೆ. ಈ ಬಗ್ಗೆ ಪ್ರಾಥಮಿಕ ಹಂತದ ವಿಚಾರಣೆ ನಡೆಸಿರುವ ಸಾಗರ ಪೊಲೀಸರು ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್​ಐಆರ್​ ದಾಖಲು ಮಾಡಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts