More

    26, 27ರಂದು ರಾಷ್ಟ್ರೀಯ ತಾಂತ್ರಿಕ ಉತ್ಸವ, ಶ್ರೀನಿವಾಸ ವಿಶ್ವವಿದ್ಯಾಲಯ ವತಿಯಿಂದ ‘ಟೆಕ್ ಯುವ’ ಕಾರ್ಯಕ್ರಮ

    ಮಂಗಳೂರು: ಮುಕ್ಕದಲ್ಲಿರುವ ಶ್ರೀನಿವಾಸ ಯುನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಸಂಸ್ಥೆಯ ವತಿಯಿಂದ ‘ಟೆಕ್ ಯುವ-24’ ರಾಷ್ಟ್ರೀಯ ಮಟ್ಟದ ತಾಂತ್ರಿಕ, ಸಾಂಸ್ಕತಿಕ ಮತ್ತು ಕ್ರೀಡಾ ಉತ್ಸವ ಮಾ.26, 27ರಂದು ನಡೆಯಲಿದೆ.

    ಟೆಕ್ ಉತ್ಸವದ ಮೊದಲ ಆವೃತ್ತಿ 2013ರಲ್ಲಿ ನಡೆದಿದೆ. ಅಂದಿನಿಂದ ಪ್ರತಿವರ್ಷ ಕರ್ನಾಟಕ, ಗೋವಾ, ತಮಿಳುನಾಡು, ಕೇರಳ ರಾಜ್ಯಗಳ ವಿವಿಧ ಇಂಜಿನಿಯರಿಂಗ್ ಕಾಲೇಜುಗಳಿಂದ 400ಕ್ಕೂ ಅಧಿಕ ವಿದ್ಯಾರ್ಥಿಗಳು ಉತ್ಸವದಲ್ಲಿ ಭಾಗವಹಿಸುತ್ತಿದ್ದಾರೆ. ಈ ವರ್ಷದ ‘ಟೆಕ್ ಯುವ-24’ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಎಥನಾಟೆಕ್ ಅಕಾಡೆಮಿಕ್ ಸೊಲ್ಯೂಷನ್ಸ್ ಪ್ರೈ.ಲಿ. ಸಂಸ್ಥೆಯ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕಿರಣ್ ಕೆ.ರಾಜಣ್ಣ ಮತ್ತು ಮಂಗಳೂರಿನ ನೋವಿಗೋ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಕಲ್ಭಾವಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಸ್ಥೆಯ ಮುಖ್ಯಸ್ಥ ಡಾ.ಥಾಮಸ್ ಪಿಂಟೊ ಮತ್ತು ‘ಟೆಕ್ ಯುವ-24’ ಸಂಯೋಜಕ ಪ್ರೊ.ಕೆ.ಶ್ರೀನಾಥ್ ರಾವ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ‘ಟೆಕ್ ಯುವ-24’ರಲ್ಲಿ ತಾಂತ್ರಿಕ, ಸಾಂಸ್ಕೃತಿಕ, ಸಾಹಿತ್ಯ ಮತ್ತು ಕ್ರೀಡೆಗಳಿಗೆ ಸಂಬಂಧಿಸಿದ 50ಕ್ಕೂ ಅಧಿಕ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು ರಾಜ್ಯದ ವಿವಿಧ ಭಾಗಗಳಿಂದ ಸುಮಾರು 1,000 ಇಂಜಿನಿಯರಿಂಗ್ ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳು, ಸುಮಾರು 3,500 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಿಗಾಗಿ ‘ಕಲಾಸ್ಪಂದನ-24’ ಸಾಂಸ್ಕೃತಿಕ ಕಾರ್ಯಕ್ರಮ ಮಾ.28ರಂದು ನಡೆಯಲಿದ್ದು ಭರತನಾಟ್ಯ ಕಲಾವಿದ ಶ್ರೀಧರ್ ಹೊಳ್ಳ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಕುಲಾಧಿಪತಿ ಡಾ.ಸಿಎ ಎ.ರಾಘವೇಂದ್ರ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಹ ಕುಲಾಧಿಪತಿ ಡಾ.ಎ.ಶ್ರೀನಿವಾಸ ರಾವ್ ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.

    ‘ಕಲಾಸ್ಪಂದನ-24’ ಸಂಯೋಜಕಿ ಪ್ರೊ.ಶ್ವೇತಾ ಪೈ, ವಿದ್ಯಾರ್ಥಿ ಸಮನ್ವಯಕಾರರಾದ ಅಭಿನ್ ಬಿ.ರೈ, ಸೌಮ್ಯ, ತಿಲಕ್ ಶೆಟ್ಟಿಗಾರ್, ಅಂತರ್ಯಾ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts