ಬೊಬ್ಬೆಕೇರಿ ಶಾಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ

35
Published on

ಕಡಬ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ ಕಾಣಿಯೂರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ನಡೆಯಿತು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಾದ ಪುಣ್ಯಶ್ರೀ, ಆರಾಧ್ಯ, ಸಾನ್ನಿಧ್ಯ ಅವರಿಗೆ ತಂಬಾಕು ನಿಯಂತ್ರಣ ಮಂಡಳಿ ಕೊಡಮಾಡಿದ ಬಹುಮಾನ ವಿತರಿಸಲಾಯಿತು.

ಕಾಣಿಯೂರು ಕ್ಲಸ್ಟರ್ ಸಿಆರ್‌ಪಿ ಯಶೋದಾ ಎ., ಎಸ್.ಡಿ.ಎಂ.ಸಿ. ಅಧ್ಯಕ್ಷೆ ಸುನೀತಾ ಗಣೇಶ್, ಉಪಾಧ್ಯಕ್ಷ ರಮೇಶ್ ಉಪ್ಪಡ್ಕ, ಶಾಲಾ ಮುಖ್ಯಶಿಕ್ಷಕಿ ಶಶಿಕಲಾ, ಶಿಕ್ಷಕರಾದ ಜನಾರ್ದನ ಹೇಮಳ, ಶೋಭಿತಾ, ಗೀತಾ ಕುಮಾರಿ, ಸುರೇಖಾ, ಜಯಲತಾ, ಸುಶ್ಮಿತಾ, ಶೃತಿ, ದಿವ್ಯಾ ಮತ್ತು ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net