More

    ವಿದ್ಯಾರ್ಥಿಗಳು ನಾಯಕತ್ವದ ಗುಣ ಬೆಳೆಸಿಕೊಳ್ಳಿ

    ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ
    ದೇಶದಲ್ಲಿ ನಡೆಯುವ ಪ್ರತಿ ಚುನಾವಣೆಯಲ್ಲೂ ಅರ್ಹರು ತಪ್ಪದೆ ಮತದಾನ ಮಾಡಬೇಕು. ಈ ಮೂಲಕ ಸಂವಿಧಾನ ನೀಡಿರುವ ಹಕ್ಕನ್ನು ಬಳಸಿಕೊಂಡು ದೇಶದ ಅಭಿವೃದ್ಧಿಯಲ್ಲಿ ಪಾಲುದಾರರಾಗಬೇಕು ಎಂದು ಪ್ರಧಾನ ಹಿರಿಯ ಸಿವಿಲ್ ಕೋರ್ಟ್ ನ್ಯಾಯಾಧೀಶ ಪ್ರೇಮ್ ಕುಮಾರ ಹೇಳಿದರು.
    ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಹೋರಾಟದ ಮೂಲಕ ಬಂದ ನಾಯಕರು ಚುನಾವಣೆಗಳಿಂದ ದೂರ ಸರಿಯುತ್ತಿದ್ದಾರೆ. ಕೇವಲ ಜಾತಿ, ಧರ್ಮ, ಹಣ ಬಲದ ಮೇಲೆ ನಡೆಯುತ್ತಿರುವುದು ದುರಂತವಾಗಿದೆ. ವಿದ್ಯಾರ್ಥಿಗಳಲ್ಲಿಯೂ ಹೋರಾಟದ ಮನೋಭಾವ ಕ್ಷೀಣಿಸಿದೆ. ಪ್ರತಿಯೊಬ್ಬರೂ ನಾಯಕತ್ವದ ಗುಣ, ಹೋರಾಟದ ಮನೋಭಾವ ಬೆಳೆಸಿಕೊಳ್ಳುವ ಅಗತ್ಯ ಇದೆ ಎಂದರು.
    ಪ್ರಧಾನ ಹಿರಿಯ ಸಿವಿಲ್ ಕೋರ್ಟ್ ನ್ಯಾಯಾಧೀಶ ಅರವಿಂದ ಸಾಯಿಬಣ್ಣ ಹಾಗರಗಿ ಮಾತನಾಡಿ, ಭಾರತವು ಪ್ರಪಂಚದಲ್ಲೇ ಅತ್ಯಂತ ದೊಡ್ಡ ಪವಿತ್ರವಾದ, ನ್ಯಾಯಸಮ್ಮತ ಪ್ರಜಾಪ್ರಭುತ್ವ ಹೊಂದಿದ ದೇಶವಾಗಿದೆ. ಸಂವಿಧಾನದ 61ನೇ ತಿದ್ದುಪಡಿಯಂತೆ ಮತದಾನದ ವಯಸ್ಸು 21ರಿಂದ 18 ಇಳಿಕೆ ಮಾಡಲಾಗಿದೆ. ಈ ಮೂಲಕ ಯುವ ಜನತೆಗೆ ನಾಯಕನನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಮಾಡಿಕೊಡಲಾಗಿದೆ. ಯುವ ಜನತೆ ಹಕ್ಕು ಬಳಸಿಕೊಂಡು ದೇಶ ಕಟ್ಟುವ ಕೆಲಸದಲ್ಲಿ ಭಾಗಿಯಾಗಬೇಕು ಎಂದರು.
    ನಗರ, ಪಟ್ಟಣ, ಮಹಾನಗರಿಗಳಲ್ಲಿ ಮತದಾನದ ಪ್ರಮಾಣ ಇಳಿಕೆಯಾಗುತ್ತಿದೆ. ಇದು ದೇಶದ ಅಭಿವೃದ್ಧಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಎಚ್ಚರಿಸಿದರು.
    ಉಪನ್ಯಾಸಕ ಡಿ.ಎನ್.ಬಾಬು, ಚುನಾವಣೆಗಳ ಮಹತ್ವ ತಿಳಿಸಿಕೊಟ್ಟರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts