ಕಾರವಾರ: ರಾಷ್ಟ್ರೀಯ ಮತದಾರರ ದಿನ (National Voters Day) ಪ್ರಯುಕ್ತ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತದಾರರ ಪ್ರತಿಜ್ಞಾ ವಿಧಿ ಭೋದನೆ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಕನಿಷ್ಕ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿದ್ದರು.
ಜಿಪಂ ಕಚೇರಿಯಲ್ಲಿ National Voters Day
ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಉತ್ತರ ಕನ್ನಡ ಜಿಲ್ಲಾ
ಪಂಚಾಯತ್ ಕಛೇರಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಆಡಳಿತ ಶಾಖೆಯ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್, ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ, ಯೋಜನಾ ನಿರ್ದೇಶಕ ಕರೀಂ ಅಸದಿ, ಮುಖ್ಯ ಲೆಕ್ಕಾಧಿಕಾರಿ ಆನಂದ ಸಾ ಹಬೀಬ್, ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ ಸೇರಿದಂತೆ ಎಲ್ಲಾ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಅಧಿಕಾರಿ – ಸಿಬ್ಬಂದಿ ವರ್ಗದವರು ಪ್ರತಿಜ್ಞೆ ಸ್ವೀಕರಿಸಿದರು.