ಹೆಬ್ರಿಯಲ್ಲಿ ರಾಷ್ಟ್ರೀಯ ಮತದಾರರ ದಿನ

voters
Published on

ಹೆಬ್ರಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ, ಪ್ರತಿಜ್ಞಾವಿಧಿ ಬೋಧನೆ ಉಪನ್ಯಾಸ ಶನಿವಾರ ನಡೆಯಿತು.

ತಹಸೀಲ್ದಾರ್ ಎಸ್.ಎ ಪ್ರಸಾದ್ ಪ್ರತಿಜ್ಞಾವಿಧಿ ಬೋಧಿಸಿದರು. ಸಂಪನ್ಮೂಲ ವ್ಯಕ್ತಿ ಕಾಲೇಜಿನ ಕಚೇರಿ ಅಧೀಕ್ಷಕ ದಿವಾಕರ್ ಶೆಟ್ಟಿ ರಾಷ್ಟ್ರೀೀಯ ಮತದಾರರ ದಿನಾಚರಣೆಯ ಶೈಕ್ಷಣಿಕ ಮತ್ತು ಐತಿಹಾಸಿಕ ಹಿನ್ನೆಲೆ ಬಗ್ಗೆ ಉಪನ್ಯಾಸ ನೀಡಿದರು. ಪ್ರಾಂಶುಪಾಲ ಡಾ.ವಿದ್ಯಾಧರ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಡಾ.ಪ್ರವೀಣಕುಮಾರ್ ಎಸ್, ವಿದ್ಯಾರ್ಥಿ ಸಾಂಸ್ಕೃತಿಕ ವೇದಿಕೆಯ ಪ್ರತಿನಿಧಿ ಪ್ರಮೋದ್ ರೆಡ್ಡಿ, ಎನ್‌ಎಸ್ಸೆಸ್ಸ್ , ರೋವರ್ ರೇಂಜರ್ಸ್, ರೆಡ್‌ಕ್ರಾಸ್ ಹಾಗೂ ಚುನಾವಣಾ ಸಾಕ್ಷರತಾ ಸಂಘದ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು. ಪ್ರವೀಣ್ ಶೆಟ್ಟಿ ಸ್ವಾಗತಿಸಿದರು. ಜ್ಯೋತಿ ವಂದಿಸಿದರು. ರೇವತಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net