ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ನವಗ್ರಹ ಶಾಂತಿ ಹೋಮ

8
Published on

ಬೆಳ್ತಂಗಡಿ: ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನಮ್‌ನ ಪ್ರತಿಷ್ಠಾಪನಾ ಜಾತ್ರೋತ್ಸವದ ಅಂಗವಾಗಿ ಕ್ಷೇತ್ರದ ಪೀಠಾಧೀಶ 1008 ಮಹಾಮಂಡಲೇಶ್ವರ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನೇತೃತ್ವದಲ್ಲಿ ನವಗ್ರಹ ಶಾಂತಿ ಹೋಮ, ನವಗ್ರಹಗಳಿಗೆ ವಿಶೇಷ ಪೂಜೆ ವೈದಿಕ ವಿಧಿ-ವಿಧಾನಗಳೊಂದಿಗೆ ನಡೆಯಿತು.

ರಾತ್ರಿ ಶ್ರೀರಾಮ ದೇವರ ರಜತ ಪಾಲಕಿ ಉತ್ಸವ, ಮಹಾ ಮೃತ್ಯುಂಜಯ ಹೋಮ, ಅನ್ನಪೂರ್ಣೇಶ್ವರಿ ದೇವಿಗೆ ಮಹಾಪೂಜೆ, ನಾಗ ದೇವರಿಗೆ ಪಂಚಾಮೃತ ಅಭಿಷೇಕ, ರಾತ್ರಿ ಶ್ರೀ ಅನ್ನಪೂರ್ಣೇಶ್ವರಿ ದೇವಿಯ ಬಲಿ ಉತ್ಸವ, ಪುಷ್ಪ ರಥೋತ್ಸವ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net