ನವಲಗುಂದ: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಶುಕ್ರವಾರ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಪಟ್ಟಣದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗೆ ಅಂಗಡಿ ಮುಂಗಟ್ಟುಗಳು ತೆರೆದಿದ್ದವು. ಮಧ್ಯಾಹ್ನ ಕೆಲವು ಅಂಗಡಿಗಳ ಮಾಲೀಕರು ಬಂದ್ ಮಾಡಿ ಬೆಂಬಲ ಸೂಚಿಸಿದರು. ರೈತ ಹೋರಾಟಗಾರು ಒಂದು ಗಂಟೆಗೂ ಹೆಚ್ಚು ಕಾಲ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ವಿವಿಧ ಕನ್ನಡಪರ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿದರು.
ವಾಹನ ಸಂಚಾರ ಬಂದ್ ಮಾಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಯಿತು. ಎರಡು ಕಿ.ಮೀ.ವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ರೈತರಿಗೂ ಸಮಸ್ಯೆ: ಬಂದ್ ಬೆಂಬಲಿಸಿ ವಿವಿಧ ರೈತಪರ ಸಂಘಟನೆಗಳು ವಾಹನ ಸಂಚಾರ ಸ್ಥಗಿತಗೊಳಿಸಿದ್ದವು. ಆಗ್ರೋ ಕೇಂದ್ರಗಳಿಂದ ರಸಗೊಬ್ಬರ, ಬಿತ್ತನೆ ಬೀಜ ತುಂಬಿಕೊಂಡು ಬಂದಿದ್ದ ಟ್ರಾೃಕ್ಟರ್, ಟಾಟಾ ಏಸ್ ವಾಹನಗಳು ತಾಸುಗಟ್ಟಲೇ ನಿಲ್ಲುವಂತಾಯಿತು.