More

    ಬರಗಾಲ ಪೀಡಿತ ಪ್ರದೇಶವೆಂದು ಘೊಷಿಸಿ

    ಹುಬ್ಬಳ್ಳಿ: ಪ್ರಸಕ್ತ ವರ್ಷ ಮಳೆಯ ಕೊರೆತೆಯಿಂದ ರಾಜ್ಯ ಸರ್ಕಾರ ಹಲವು ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳೆಂದು ಘೊಷಿಸಿದ್ದು, ಜಿಲ್ಲೆಯ ನವಲಗುಂದ ಹಾಗೂ ಅಣ್ಣಿಗೇರಿ ತಾಲೂಕುಗಳನ್ನು ಸೇರ್ಪಡೆ ಮಾಡಬೇಕೆಂದು ಶಾಸಕ ಎನ್.ಎಚ್. ಕೋನರಡ್ಡಿ ಒತ್ತಾಯಿಸಿದ್ದಾರೆ.

    ಈ ಕುರಿತು ಅವರು ಮುಖ್ಯಮಂತ್ರಿ, ಕಂದಾಯ ಹಾಗೂ ಕೃಷಿ ಸಚಿವರಿಗೆ ಪತ್ರ ಬರೆದಿದ್ದಾರೆ.

    ನವಲಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನವಲಗುಂದ ಮತ್ತು ಅಣ್ಣಿಗೇರಿ ತಾಲೂಕುಗಳು ಮಳೆಯಾಧಾರಿತ ಪ್ರದೇಶಗಳಾಗಿದ್ದು, ಇಲ್ಲಿನ ರೈತರು ಮಳೆಯನ್ನು ನಂಬಿಕೊಂಡು ಮುಂಗಾರು ಬಿತ್ತನೆ ಮಾಡಿದ್ದರು. ಪ್ರಸಕ್ತ ವರ್ಷ ಮುಂಗಾರು ಸಮಯದಲ್ಲಿ ಅವಶ್ಯಕತೆಗೆ ತಕ್ಕಂತೆ ಮಳೆಯಾಗಿರುವುದಿಲ್ಲ. ಈ ತಾಲೂಕಿನ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ. ಮಳೆ ಕೊರತೆಯಿಂದ ಮುಂಗಾರು ಬಿತ್ತನೆ ಮಾಡಿದ ರೈತರು ಬೆಳೆ ಬಾರದೇ ಸಂಕಷ್ಟಕ್ಕೆ ಒಳಗಾಗಿರುತ್ತಾರೆ ಎಂದು ಹೇಳಿದ್ದಾರೆ.

    ಸರ್ಕಾರ ಘೊಷಿಸಿರುವ ಬರಗಾಲ ಪೀಡಿತ ಪ್ರದೇಶಗಳ ಪಟ್ಟಿಯಲ್ಲಿ ನವಲಗುಂದ ಮತ್ತು ಅಣ್ಣಿಗೇರಿ ತಾಲೂಕುಗಳು ಸೇರ್ಪಡೆಗೊಂಡಿರುವುದಿಲ್ಲ. ಆದ್ದರಿಂದ, ಕೂಡಲೇ ಈ ಎರಡು ತಾಲೂಕುಗಳನ್ನು ಸೇರಿಸಬೇಕು ಎಂದು ಆಗ್ರಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts