18.5 C
Bangalore
Monday, December 16, 2019

ಆರೋಗ್ಯ ಇಲಾಖೆಗೆ 150 ಕೋಟಿ

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಬಾಗಲಕೋಟೆ: ಅಧಿಕಾರ ವಹಿಸಿಕೊಂಡು ನೂರು ದಿನಗಳಲ್ಲಿ ಆರೋಗ್ಯ ಇಲಾಖೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಾಗಿದೆ. ಸರ್ಕಾರಿ ಆಸ್ಪತ್ರೆಗಳಿಗೆ ಹೊಸ ಕಾಯಕಲ್ಪ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 150 ಕೋಟಿ ರೂ. ಆರೋಗ್ಯ ಇಲಾಖೆಗೆ ನೀಡುತ್ತಿದೆ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ ಹೇಳಿದರು.

ನವನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ಸಂಜೆ ಹಮ್ಮಿಕೊಂಡಿದ್ದ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮೊದಲನೇ ಮಹಡಿ ಉದ್ಘಾಟನೆ ಹಾಗೂ ನೂತನ ಆಂಬುಲೆನ್ಸ್​ಗಳ ಪೂಜಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯಾದ್ಯಂತ ಆಂಬುಲೆನ್ಸ್​ಗಳಲ್ಲಿ ದೋಷಗಳು ಕಂಡು ಬಂದ ಹಿನ್ನೆಲೆ 450 ಹೊಸ ಆಂಬುಲೆನ್ಸ್​ಗಳನ್ನು ರಾಜ್ಯದ 30 ಜಿಲ್ಲೆಗಳಿಗೆ ನೀಡಲು ಉದ್ದೇಶಿಸಲಾಗಿದೆ. ಇಂದು ಬಾಗಲಕೋಟೆ ಜಿಲ್ಲೆಗೆ 14 ಆಂಬುಲೆನ್ಸ್​ಗಳನ್ನು ಕೊಡಲಾಗಿದೆ ಎಂದರು.

ವರ್ಷಕ್ಕೆ 8 ಸಾವಿರ ವೈದ್ಯರನ್ನು ತಯಾರಿಸುವ ಶಕ್ತಿ ಕರ್ನಾಟಕಕ್ಕಿದೆ. ಹೀಗಾಗಿ ಸರ್ಕಾರಿ ಕೋಟಾದಡಿ ವೈದ್ಯಕೀಯ ಶಿಕ್ಷಣ ಪಡೆದ ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯಗೊಳಿಸಲು ಕಾಯ್ದೆ ರೂಪಿಸಿ ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಲಾಗಿದೆ. ಇದಕ್ಕೆ ಒಪ್ಪಿಗೆ ದೊರೆತಲ್ಲಿ ಕರ್ನಾಟಕದಲ್ಲಿ ವೈದ್ಯರ ಕೊರತೆ ಉಂಟಾಗುವುದಿಲ್ಲ. ರಾಜ್ಯದಲ್ಲಿ 400 ವೈದ್ಯರು, 1600 ಎಎನ್​ಎಂಗಳನ್ನು ನೇಮಕ ಮಾಡಲಾಗಿದೆ. ಕೇಂದ್ರ ಸರ್ಕಾರದ ಸಹಯೋಗದಲ್ಲಿ 40 ಕೋಟಿ ರೂ. ವೆಚ್ಚದಲ್ಲಿ ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿರುವ ವೈದ್ಯಕೀಯ ವಿಜ್ಞಾನ ಸಂಶೋಧನೆ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ ಎಂದರು.

ಕೇಂದ್ರ ಸರ್ಕಾರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ 326 ಔಷಧಗಳನ್ನು ಬ್ಯಾನ್ ಮಾಡಿದ್ದು, ಇಂತಹ ಔಷಧಗಳ ಮೇಲೆ ರಾಜ್ಯ ಸರ್ಕಾರವು ಹದ್ದಿನ ಕಣ್ಣು ಇಟ್ಟಿದೆ. ಕೇಂದ್ರದ ಆಯುಷ್ಮಾನ ಭಾರತ, ರಾಜ್ಯದ ಆರೋಗ್ಯ ಕರ್ನಾಟಕ ಯೋಜನೆ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ. ಆಯುಷ್ಮಾನ ಭಾರತ ಯೋಜನೆಯಿಂದ ಒಂದು ಕುಟುಂಬಕ್ಕೆ 5 ಲಕ್ಷದವರೆಗೆ ಚಿಕಿತ್ಸೆ ವೆಚ್ಚ ದೊರೆಯಲಿದೆ. ರಾಜ್ಯದ 1 ಕೋಟಿ ಜನ ಈ ಎರಡು ಯೋಜನೆ ಲಾಭ ಪಡೆಯಲಿದ್ದಾರೆ ಎಂದರು. ಜಿಪಂ ಅಧ್ಯಕ್ಷೆ ವೀಣಾ ಕಾಶಪ್ಪನವರ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ, ಜಿಪಂ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ಜಿಪಂ ಸದಸ್ಯರಾದ ಮಹಾಂತೇಶ ಉದುಪುಡಿ, ಮುರಗೆಪ್ಪ ದೇಗಿನಾಳ, ತಾಪಂ ಅಧ್ಯಕ್ಷ ಚನ್ನನಗೌಡ ಪರನಗೌಡರ, ಜಾವೇದ್ ಅಕ್ತರ್, ಡಿಸಿ ಶಾಂತಾರಾಮ ಕೆ.ಜಿ. ಮತ್ತಿತರರಿದ್ದರು. ಜಿಪಂ ಸಿಇಒ ಗಂಗೂಬಾಯಿ ಮಾನಕರ, ಎಸಿ ಎಚ್.ಜಯಾ, ಡಿಎಚ್​ಒ ಅನಂತ ದೇಸಾಯಿ ಮತ್ತಿತರರಿದ್ದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಂದ ಶೋಷಣೆಯಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿವೆ. ಲಂಚ ಪಡೆದ ವೈದ್ಯರನ್ನು ಸೇವೆಯಿಂದ ವಜಾಗೊಳಿಸಲಾಗುತ್ತಿದೆ. ಬಾದಾಮಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಶೋಷಣೆ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಈ ರೀತಿ ಶೋಷಣೆ ವೈದ್ಯ ವೃತ್ತಿಗೆ ಶೋಭೆ ತರುವುದಿಲ್ಲ. ರೋಗಿಗಳಿಗೆ ಪ್ರಾಮಾಣಿಕ ಸೇವೆ ಒದಗಿಸಬೇಕು.

| ಶಿವಾನಂದ ಪಾಟೀಲ ಜಿಲ್ಲಾ ಉಸ್ತುವಾರಿ ಸಚಿವ

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...