16 C
Bangalore
Saturday, December 7, 2019

ಆರಂಭವಾಗದ ಇಂದಿರಾ ಕ್ಯಾಂಟೀನ್

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಸಂತೋಷ ದೇಶಪಾಂಡೆ ಬಾಗಲಕೋಟೆ: ಬಡವರು, ಕಾರ್ವಿುಕರು, ಪ್ರಯಾಣಿಕರಿಗೆ ಅಗ್ಗದ ದರದಲ್ಲಿ ಹೊಟ್ಟೆ ತುಂಬ ಊಟ-ಉಪಾಹಾರ ನೀಡಬೇಕೆಂಬ ಉದ್ದೇಶದಿಂದ ಹಿಂದಿನ ಕಾಂಗ್ರೆಸ್ ಸರ್ಕಾರ ಆರಂಭಿಸಿದ್ದ ಇಂದಿರಾ ಕ್ಯಾಂಟೀನ್​ಗಳು ಕೋಟೆನಾಡಿನ ಜನರಿಗೆ ಮರೀಚಿಕೆಯಾಗಿವೆ.

ಜಿಲ್ಲೆಯಲ್ಲಿ ಹಳೇ ಬಾಗಲಕೋಟೆ ಮತ್ತು ನವನಗರ ಬಸ್​ನಿಲ್ದಾಣ ಸೇರಿ ನಗರಕ್ಕೆ ಎರಡು, ಬೀಳಗಿ, ಜಮಖಂಡಿ, ಬಾದಾಮಿ, ಹುನಗುಂದ, ಮುಧೋಳಕ್ಕೆ ತಲಾ ಒಂದು ಸೇರಿ ಆರು ಕ್ಯಾಂಟೀನ್ ಮಂಜೂರಾಗಿವೆ. ಅಂದುಕೊಂಡಂತೆ ನಡೆದಿದ್ದರೆ ಈಗಾಗಲೇ ಇವು ಕಾರ್ಯಾರಂಭ ಮಾಡಬೇಕಿತ್ತು. ಆದರೆ ಜನರ ನಿರೀಕ್ಷೆ ಹುಸಿಯಾಗಿಸಿವೆ.

ವಿಳಂಬಕ್ಕೆ ಕಾರಣವೇನು ?: ಇಂದಿರಾ ಕ್ಯಾಂಟೀನ್ ಜವಾಬ್ದಾರಿ ಹೊಂದಿರುವ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಸ್ಥಳೀಯ ಸಂಸ್ಥೆಗಳ ಬಹುತೇಕ ಮುಖ್ಯಾಧಿಕಾರಿಗಳು ಪ್ರಭಾರ ಹುದ್ದೆಯಲ್ಲಿರುವುದರಿಂದ ಕ್ಯಾಂಟೀನ್ ಆರಂಭಕ್ಕೆ ವಿಶೇಷ ಒತ್ತು ನೀಡಲು ಸಾಧ್ಯವಾಗುತ್ತಿಲ್ಲವಾದ್ದರಿಂದ ಸಮಯಕ್ಕೆ ಸರಿಯಾಗಿ ಕೆಲಸಗಳು ನಡೆಯುತ್ತಿಲ್ಲ. ಹೀಗಾಗಿ ಕ್ಯಾಂಟೀನ್​ಗಳ ಆರಂಭಕ್ಕೆ ಹಿನ್ನಡೆಯಾಗುತ್ತಿದೆ.

ಯಾವ ಹಂತದಲ್ಲಿವೆ: ಹಳೇ ಬಾಗಲಕೋಟೆ ಬಸ್ ನಿಲ್ದಾಣ, ನವನಗರ ಬಸ್​ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಕಟ್ಟಡ ಬಹುತೇಕ ಪೂರ್ಣಗೊಂಡಿದೆ. ಅಡುಗೆ ಮನೆ ಪರಿಕರ ಮಾತ್ರ ಅಳವಡಿಸಬೇಕಿದೆ. ಆದರೆ, ನಾಲ್ಕು ತಿಂಗಳಿನಿಂದ ಪರಿಕರ ಅಳವಡಿಕೆ ಮತ್ತು ಸಣ್ಣಪುಟ್ಟ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಶೀಘ್ರ ಮುಗಿಯುವ ಲಕ್ಷಣಗಳಿಲ್ಲ. ಬೀಳಗಿ, ಜಮಖಂಡಿ, ಬಾದಾಮಿ, ಹುನಗುಂದ, ಮುಧೋಳದಲ್ಲಿ ಅಡಿಪಾಯ ಹಂತದಲ್ಲಿದ್ದು, ಇನ್ನೂ ಒಂದು ವರ್ಷ ಕಾರ್ಯಾರಂಭ ಮಾಡಲು ಸಾಧ್ಯವಿಲ್ಲ ಎನ್ನಲಾಗುತ್ತಿದೆ.

ಯಾವ ರೀತಿ ಇರುತ್ತೆ ಕ್ಯಾಂಟೀನ್: ಸರ್ಕಾರದ ಮಾರ್ಗಸೂಚಿ ಪ್ರಕಾರ 2400 ಅಡಿ ಜಾಗದಲ್ಲಿ ಕ್ಯಾಂಟೀನ್ ನಿರ್ಮಾಣ ಮಾಡಲಾಗುತ್ತದೆ. ಅಡುಗೆ ಕೋಣೆ, ಸೇವಾ ಕೊಠಡಿ, ಊಟದ ಕೊಠಡಿ, ಶೌಚಗೃಹ ಸೇರಿ ಸುಸಜ್ಜಿತ ಕಟ್ಟಡ ನಿರ್ವಿುಸಲಾಗುತ್ತದೆ. ಕ್ಯಾಂಟೀನ್ ನಿರ್ವಣಕ್ಕೆ ರಾಜ್ಯಮಟ್ಟದಲ್ಲಿ ಗುತ್ತಿಗೆ ನೀಡಲಾಗಿದ್ದು, 57 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತದೆ. ಆಯಾ ಭಾಗದ ನಗರ, ಸ್ಥಳೀಯ ಸಂಸ್ಥೆಗಳ ಹಣದಲ್ಲಿ ಲೈಟಿಂಗ್, ಟೇಬಲ್, ಚರಂಡಿ, ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಒಂದು ಕ್ಯಾಂಟೀನ್​ಗೆ 65 ರಿಂದ 70 ಲಕ್ಷ ರೂ. ಖರ್ಚಾಗುತ್ತದೆ.

ಕ್ಯಾಂಟೀನ್ ನಿರ್ವಹಣೆಯನ್ನು ನಗರ ಸ್ಥಳೀಯ ಸಂಸ್ಥೆಗಳಿಗೆ ವಹಿಸಲಾಗಿದೆ. ಊಟ-ಉಪಾಹಾರವನ್ನು ನಗರಾಭಿವೃದ್ಧಿ ಕೋಶ ಇ ಟೆಂಡರ್ ಮೂಲಕ ಖಾಸಗಿ ಕಂಪನಿಗಳಿಗೆ ನೀಡುತ್ತದೆ. ಜಿಲ್ಲೆಯಲ್ಲಿ ಈಗಾಗಲೇ ಕೆಲವು ಕ್ಯಾಂಟೀನ್​ಗಳ ಊಟ, ಉಪಾಹಾರವನ್ನು ಇ ಟೆಂಡರ್ ಮೂಲಕ ಖಾಸಗಿ ಕಂಪನಿಗಳಿಗೆ ನೀಡಲಾಗಿದೆ.

10 ರೂ.ಗೆ ಊಟ: ಇಂದಿರಾ ಕ್ಯಾಂಟೀನ್​ನಲ್ಲಿ ಪ್ರತಿನಿತ್ಯ ವಿಭಿನ್ನ ಊಟ-ಉಪಾಹಾರ ನೀಡಲಾಗುತ್ತದೆ. ಬೆಳಗ್ಗೆ ಟಿಫನ್​ಗೆ 5 ರೂ., ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ 10 ರೂ. ನಿಗದಿ ಮಾಡಲಾಗಿದೆ. ಕ್ಯಾಂಟೀನ್​ನಲ್ಲಿ ಬೆಳಗ್ಗೆ 7.30 ರಿಂದ 10 ಗಂಟೆ ವರೆಗೆ ಟಿಫನ್, ಮಧ್ಯಾಹ್ನ 12.30 ರಿಂದ 3 ಗಂಟೆವರೆಗೆ, ಸಂಜೆ 6 ರಿಂದ ರಾತ್ರಿ 8 ವರೆಗೆ ಊಟ ದೊರೆಯುತ್ತದೆ.

ಪೌರಾಡಳಿತ ನಿರ್ದೇಶನಾಲಯದ ಸೂಚನೆಯಂತೆ ಇಂದಿರಾ ಕ್ಯಾಂಟೀನ್ ನಿರ್ವಣವಾಗುತ್ತಿವೆ. ಬಾಗಲಕೋಟೆ, ನವನಗರದ ಊಟ, ಉಪಾಹಾರದ ಟೆಂಡರ್​ಗಳು ಪೂರ್ಣಗೂಂಡಿದ್ದು, ಇನ್ನುಳಿದವುಗಳಿಗೆ ಟೆಂಡರ್ ಕರೆಯಬೇಕಿದೆ. ತಾಂತ್ರಿಕ ಸಮಸ್ಯೆಯಿಂದ ಆರಂಭಕ್ಕೆ ಸಮಸ್ಯೆಯಾಗಿದೆ. ಬೇಗನೆ ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು.

ಗಣಪತಿ ಪಾಟೀಲ ಪ್ರಭಾರ ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಬಾಗಲಕೋಟೆ

 

ಬಾಗಲಕೋಟೆಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭವಾಗುತ್ತದೆ ಎನ್ನುವ ನಿರೀಕ್ಷೆ ಇತ್ತು. ಆದರೆ, ವರ್ಷ ಕಳೆದರೂ ಆರಂಭವಾಗಿಲ್ಲ. ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ. ಅಧಿಕಾರಿಗಳ ನಿರ್ಲಕ್ಷ್ಯೆ ಇದಕ್ಕೆ ಪ್ರಮುಖ ಕಾರಣ.

ಗುರುರಾಜ.ಎಸ್. ಬಾಗಲಕೋಟೆ ನಿವಾಸಿ

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...