More

    ಶ್ರೀ ಬ್ರಾಹ್ಮೀ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವಕ್ಕೆ ಹರಿದು ಬರುತ್ತಿದೆ ಭಕ್ತಸಾಗರ

    ಕಮಲಶಿಲೆ: ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಳದಲ್ಲಿ ಶರನ್ನವರಾತ್ರಿ ಮಹೋತ್ಸವ ಶನಿವಾರ ಆರಂಭಗೊಂಡಿದ್ದು, ಅ.26ರ ತನಕ ಪ್ರತಿದಿನ ತ್ರಿಕಾಲ ಪೂಜೆ, ನವರಾತ್ರಿ ವಿಶೇಷ ಪೂಜೆ, ಮಹಾಪೂಜೆ, ಸುತ್ತುಬಲಿ ನಡೆಯಲಿದೆ.

    ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಸಾವಿರಾರು ಭಕ್ತರು ದೇವಳಕ್ಕೆ ಆಗಮಿಸಿ, ಶರನ್ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
    ಕೋವಿಡ್ 19 ನಿಯಮಾವಳಿ ಅನ್ವಯ ಭಕ್ತರು ಶೀಘ್ರ ದೇವರಿಗೆ ಸೇವೆ ಸಲ್ಲಿಸಿ, ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ. ನೂತನವಾಗಿ ನಿರ್ಮಿಸಿದ 3ಮಹಡಿಗಳ ಶ್ರೀ ಬ್ರಾಹ್ಮೀ ಭೋಜನ ಶಾಲೆಯಲ್ಲಿ ಭಕ್ತರಿಗೆ ಅನ್ನಪ್ರಸಾದಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

    ಆನುವಂಶಿಕ ಆಡಳಿತ ಧರ್ಮದರ್ಶಿ ಎಸ್.ಸಚ್ಚಿದಾನಂದ ಚಾತ್ರ, ಧರ್ಮದರ್ಶಿ ಬರೆಗುಂಡಿ ಶ್ರೀನಿವಾಸ ಚಾತ್ರ, ಆಜ್ರಿ ಚಂದ್ರಶೇಖರ ಶೆಟ್ಟಿ ಹೆನ್ನಾಬೈಲು, ವ್ಯವಸ್ಥಾಪಕ ಗುರು ಭಟ್, ಕ್ಷೇತ್ರದ ಸಿಬ್ಬಂದಿ, ಸ್ವಯಂಸೇವಕರು ಭಕ್ತರಿಗೆ ದೇವರ ದರ್ಶನ, ಅನ್ನಪ್ರಸಾದ ಸೇವೆ ವ್ಯವಸ್ಥೆ ಕಲ್ಪಿಸುವಲ್ಲಿ ಸಹರಿಸುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts